ರಾಯಚೂರು: ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನಗರಸಭೆ ವತಿಯಿಂದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹರ್-ಘರ್–ತಿರಂಗಾ ಅಭಿಯಾನದಡಿ ಮ್ಯಾರಥಾನ್ ಹಾಗೂ ಬೈಕ್ ರ್‍ಯಾಲಿಗೆ ಜಿಲ್ಲಾಧಿಕಾರಿ ನಿತೀಶ್ ಚಾಲನೆ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಶಿವಪ್ಪ ಭಜಂತ್ರಿ, ರಾಯಚೂರು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಗದೀಶ್ ಗಂಗಣ್ಣನವರ, ನಗರಸಭೆ ಪೌರಾಯುಕ್ತ ಗುರುಸಿದ್ದಯ್ಯಸ್ವಾಮಿ ಹಿರೇಮಠ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವೀರೇಶ ನಾಯಕ ಹಾಗೂ ರೋಟರಿ ಕಬ್ಲ್ ಸದಸ್ಯರು ಪಾಲ್ಗೊಂಡಿದ್ದರು.