ಹಟ್ಟಿ ಚಿನ್ನದ ಗಣಿ: ಹಟ್ಟಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರೌಢ ಶಾಲೆಗಳ ಶಿಕ್ಷಕರು ಎಸ್ಎಸ್ಎಲ್ಸಿ ಫಲಿತಾಂಶ ಹೆಚ್ಚಿಸುವಲ್ಲಿ ವಿಫಲರಾಗಿದ್ದಾರೆ ಎಂದು ವಿದ್ಯಾರ್ಥಿಗಳ ಪಾಲಕರು ಆರೋಪ ಮಾಡಿದ್ದಾರೆ.

ಹಟ್ಟಿ ಪಟ್ಟಣದ ಸುತ್ತಲು ಒಟ್ಟು 10 ಸರ್ಕಾರಿ ಪ್ರೌಢ ಶಾಲೆಗಳು ಇದ್ದು, ಈ ಭಾರಿ ನಿರೀಕ್ಷೆಯಂತೆ ಫಲಿತಾಂಶ ಕಂಡುಬಂದಿಲ್ಲ. ಒಟ್ಟು 10 ಸರ್ಕಾರಿ ಶಾಲೆಯ 709 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 242 ವಿದ್ಯಾರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದಾರೆ. 467 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ.

10 ಸರ್ಕಾರಿ ಪ್ರೌಢ ಶಾಲೆಗಳು ಶೇ 45ರಷ್ಟು ಫಲಿತಾಂಶ ಕೂಡ ದಾಟಿಲ್ಲ. ಫಲಿತಾಂಶ ಕಡಿಮೆ ಬರಲು ಕಾರಣರಾದ ಶಿಕ್ಷಕರ ವಿರುದ್ಧ ಶಿಕ್ಷಣ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎನ್ನುತ್ತಾರೆ ಸಾರ್ವಜನಿಕರು.

ಸ್ಧಳೀಯ ಹಟ್ಟಿ ಕ್ಯಾಂಪ್ ಪ್ರದೇಶದಲ್ಲಿ ಇರುವ ಸರ್ಕಾರಿ ಪ್ರೌಢಶಾಲೆಯ ಎಸ್ಎಸ್ಎಲ್ಸಿ ಫಲಿತಾಂಶ ಶೇ 17ಕ್ಕೆ ಕುಸಿದಿದೆ. ಈ ಶಾಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕಿಯರೇ ಇದ್ದಾರೆ. ಹಲವು ವರ್ಷಗಳಿಂದ ಒಂದೇ ಶಾಲೆಯಲ್ಲಿ ಠಿಕಾಣಿ ಹೂಡಿದ್ದರೂ ಫಲಿತಾಂಶ ಸುಧಾರಣೆಗೆ ಶ್ರಮಿಸುತ್ತಿಲ್ಲ. 1,200 ವಿದ್ಯಾರ್ಥಿಗಳು ಓದುತ್ತಿದ್ದ ಈ ಶಾಲೆಯಲ್ಲಿ ಈಗ ಕೇವಲ 46 ವಿದ್ಯಾರ್ಥಿಗಳು ಇದ್ದಾರೆ. ಮುಂದೆ ಒಂದು ದಿನ ಶಾಲೆ ಮುಚ್ಚುವ ಹಂತಕ್ಕೆ ತಲುಪಲಿದೆ ಎನ್ನುತ್ತಾರೆ ಪ್ರಜ್ಞಾವಂತರು.

ಶಿಕ್ಷಕರ ನಿರ್ಲಕ್ಷ್ಯದಿಂದ ಬಡ ವಿದ್ಯಾರ್ಥಿಗಳ ಕನಸು ನುಚ್ಚು ನೂರಾಗಿದೆ. ಕೆಲ ಶಿಕ್ಷಕರು ಸಂಬಳಕ್ಕೆ ಮಾತ್ರ ಕೆಲಸ ಮಾಡುತ್ತಿದ್ದಾರೆ. ಇಂತಹ ಶಿಕ್ಷಕರಿಗೆ ಶಿಕ್ಷೆ ಆಗಬೇಕು. ಒಂದೇ ಶಾಲೆಯಲ್ಲಿ 10 ವರ್ಷಕ್ಕಿಂತ ಹೆಚ್ವು ವರ್ಷ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರನ್ನು ಬೇರೆ ಕಡೆ ವರ್ಗಾವಣೆ ಮಾಡಬೇಕು. ಪ್ರಾಮಾಣಿಕ ಶಿಕ್ಷಕರನ್ನು ನಿಯೋಜಿಸಬೇಕು ಎಂದು ಪಾಲಕರು ಒತ್ತಾಯ ಮಾಡಿದ್ದಾರೆ.

ಸರ್ಕಾರಿ ಶಾಲೆಯ ಕೆಲವು ಶಿಕ್ಷಕರು ಒಂದೇ ಶಾಲೆಯಲ್ಲಿ ಹಲವು ವರ್ಷಗಳಿಂದ ಪಾಠ ಮಾಡುತ್ತಿದ್ದಾರೆ. ಆದರೆ ಫಲಿತಾಂಶ ಹೆಚ್ಚಿಸುವಲ್ಲಿ ವಿಫಲರಾಗಿದ್ದಾರೆ. ತನಿಖೆ ಮಾಡಿ ಕ್ರಮ ಕೈಗೊಳ್ಳಬೇಕು
ಮಲ್ಲಿಕಾರ್ಜುನ ಕಡೆಚೂರು ವಿದ್ಯಾರ್ಥಿ ಸಂಘದ ಮುಖಂಡ ಹಟ್ಟಿ

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ನೀಡಿದ ಶಾಲೆಯ ಶಿಕ್ಷಕರಿಗೆ ನೋಟಿಸ್ ನೀಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು
ಹುಂಬಣ್ಣ ಕ್ಷೇತ್ರ ಶಿಕ್ಷಣಾಧಿಕಾರಿ ಲಿಂಗಸುಗೂರು

ಕ್ಷೇತ್ರ ಶಿಕ್ಷಣಾಧಿಕಾರಿ ಕೇವಲ ಸೀಟಿಗೆ ಮಾತ್ರ ಸೀಮಿತರಾಗಿದ್ದಾರೆ. ಶಾಲೆಗೆ ಭೇಟಿ ನೀಡಿ ಪರಿಶೀಲನೆ ಮಾಡಿಲ್ಲ. ಇಂತಹ ಅಧಿಕಾರಿಯನ್ನು ಬದಲಾವಣೆ ಮಾಡಬೇಕು
ಲಾಲ್ಪೀರ್ ಶಿಕ್ಷಣಪ್ರೇಮಿ ಹಟ್ಟಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.