ಹಟ್ಟಿ ಚಿನ್ನದ ಗಣಿ: ಗುತ್ತಿಗೆ ನೌಕರರಿಗೆ ಕನಿಷ್ಟ ಕೂಲಿ ಮೊತ್ತ ಪಾವತಿಸಬೇಕು ಎಂದು ಆಗ್ರಹಿಸಿ ಸಿಐಟಿಯು ಸಂಘಟನೆ ಮುಖಂಡರು ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಹೋರಾಟಗಾರರನ್ನು ಬಂಧಿಸಲಾಗಿದೆ. ಅವರನ್ನು ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಸ್ಥಳೀಯ ಸಿಐಟಿಯು ಮುಖಂಡರು ಪ್ರತಿಭಟಿಸಿದರು.

ಪಟ್ಟಣದ ಪೊಲೀಸ್ ಠಾಣೆ ಬಳಿಯ ಮುಖ್ಯ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ಸಿಐಟಿಯು ಮುಖಂಡರು, ‘ಕೈಗಾರಿಕೆ, ಉದ್ಯಮಗಳಲ್ಲಿ ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಕೂಲಿ ಕಾರ್ಮಿಕರಿಗೆ ಕನಿಷ್ಠ ಕೂಲಿ ತಿಂಗಳಿಗೆ ₹31 ಸಾವಿರ ಪಾವತಿಸಬೇಕೆಂದು ಒತ್ತಾಯಿಸಿ ಸಿಐಟಿಯು ಮುಖಂಡರು ಪ್ರತಿಭಟನೆ ನಡೆಸಿದ್ದರು. ಹೋರಾಟ ಹತ್ತಿಕ್ಕುವ ಉದ್ದೇಶದಿಂದ ಅವರನ್ನು ಬಂಧಿಸಲಾಗಿದೆ. ಬಂಧಿತ ಮುಖಂಡರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಹಾಗೂ ಕನಿಷ್ಠ ₹31 ಸಾವಿರ ಸಂಬಳ ಗುತ್ತಿಗೆ ಕಾರ್ಮಿಕರಿಗೆ ನಿಗದಿಮಾಡಬೇಕು’ ಎಂದು ಆಗ್ರಹಿಸಿದರು

ಕೇಂದ್ರ ಸರ್ಕಾರ ಹೋರಾಟಗಾರರನ್ನು ಹತ್ತಿಕ್ಕುವ ಹುನ್ನಾರ ಮಾಡುತ್ತಿದೆ ಇದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸಿಐಟಿಯು ಮುಖಂಡರಾದ ರಮೇಶ ವೀರಾಪುರ, ವೆಂಕೋಬ್ ಮಿಯ್ಯಾಪುರ, ಮೈನುದ್ದೀನ್, ನಿಂಗಪ್ಪ ವೀರಾಪುರ, ಮಹ್ಮದ್ ಹನೀಫ್, ಚಂದ್ರು ನೇಲ್ಗಿ, ರಮೇಶ ಬಾಬು, ಫಕ್ರುದ್ದೀನ್, ಪಾಶಾ ಕ್ಯಾಂಟೀನ್, ಪೆಂಚಲಯ್ಯ, ಮಿಯ್ಯಾಸಾಬ್ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-32-2123590778

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.