ಹಟ್ಟಿ ಚಿನ್ನದ ಗಣಿ: ಇಲ್ಲಿಯ ಚಿನ್ನದ ಗಣಿ ಕಂಪನಿ ಕಾರ್ಮಿಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಪದಾಧಿಕಾರಿಗಳು ಪ್ರತಿಭಟನೆ ವೇಳೆ ಆಡಳಿತ ಮಂಡಳಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಹುದಿನಗಳ ಬೇಡಿಕೆಯಾದ ಮೆಡಿಕಲ್ ಅನ್ಫಿಟ್ ಯೋಜನೆ, ಹೊಸ ವೇತನ ಒಪ್ಪಂದ ಜಾರಿ ಮಾಡಬೇಕು. ಆಸ್ಪತ್ರೆ ಸೌಲಭ್ಯಗಳನ್ನು ಒದಗಿಸಬೇಕು ಎಂದು ಕಾರ್ಮಿಕರು ಅವರು ಆಗ್ರಹಿಸಿದರು.

ಹಲವು ಕಾರ್ಮಿಕರು ಮೆಡಿಕಲ್ ಅನ್ಫಿಟ್ ಯೋಜನೆಯಿಂದ ವಂಚಿತರಾಗಿದ್ದಾರೆ. ಇದು ಇದೇ ರೀತಿ ಮುಂದುವರಿದರೆ ಕಾರ್ಮಿಕರ ಕುಟುಂಬಗಳು ಬೀದಿಗೆ ಬೀಳಬೇಕಾದ ಪರಿಸ್ಥಿತಿ ಬರುತ್ತದೆ ಎಂದು ಹೇಳಿದರು.

ಪ್ರತಿಭಟನೆಯನ್ನು ಹಗುರವಾಗಿ ತೆಗೆದುಕೊಂಡರೆ, ಮುಂದಾಗುವ ಅನಾಹುತಗಳಿಗೆ ಗಣಿ ಕಂಪನಿ ಆಡಳಿತವೇ ನೇರ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಡಳಿತ ಮಂಡಳಿ ಎಚ್ಚೆತ್ತುಕೊಂಡು ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕು. ನಿರ್ಲಕ್ಷ್ಯ ಮಾಡಿದರೆ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಪದಾಧಿಕಾ ರಿಗಳು ಎಚ್ಚರಿಕೆ ನೀಡಿದರು.

ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಪದಾಧಿಕಾರಿಗಳು, ಎಸ್, ಎಸ್.ಟಿ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಮಿಕರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-32-1588337352

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.