ಭಾನುವಾರ, ಜೂನ್ 13, 2021
25 °C

ಹಟ್ಟಿ: ಚಿನ್ನ ಉತ್ಪಾದನೆ ಸ್ಧಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಟ್ಟಿ ಚಿನ್ನದ ಗಣಿ: ಇಲ್ಲಿನ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಮೇ 24ರವರೆಗೆ ಚಿನ್ನ ಉತ್ಪಾದನೆ ಸ್ಧಗಿತಗೊಳಿಸಲಾಗಿದೆ.

‘ಕೊರೊನಾ ಸೋಂಕು ನಿಯಂತ್ರಣಕ್ಕೆ ಲಾಕ್‌ಡೌನ್‌ ಜಾರಿಯಲ್ಲಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಕಾರ್ಮಿಕರು ಹಾಗೂ ಸಿಬ್ಬಂದಿಗೆ ಮನೆಯಲ್ಲಿಯೇ ಇರುವಂತೆ ಸೂಚನೆ ನೀಡಲಾಗಿದೆ’ ಎಂದು ಕಂಪನಿಯ ಪ್ರಭಾರ ಕಾರ್ಯನಿರ್ವಾಹಕ ನಿರ್ದೇಶಕ ಪ್ರಕಾಶ ಬಹದೂರ್ ತಿಳಿಸಿದ್ದಾರೆ.

‘ನೌಕರರು ಅನವಶ್ಯಕವಾಗಿ ರಸ್ತೆಯಲ್ಲಿ ತಿರುಗಾಡಿದರೆ ಅಂಥವರನ್ನು ಗೈರುಹಾಜರಿ ಎಂದು ಪರಿಗಣಿಸಲಾಗುವುದು. ನೌಕರರು ಕೇಂದ್ರ ಬಿಟ್ಟು ಬೇರೆ ಸ್ಥಳಗಳಿಗೆ ಭೇಟಿ ನೀಡಿ ಬಂದರೆ ಅಂಥವರ ವಿರುದ್ಧ ಕೋವಿಡ್ ನಿಯಮ ಉಲ್ಲಂಘನೆ ಅಡಿ ‍ಪ್ರಕರಣ ದಾಖಲಿಸಲಾಗುವುದು’ ಎಂದು ಎಚ್ಚರಿಸಿದ್ದಾರೆ.

‘ಅದಿರನ್ನು ಸಂಸ್ಕರಿಸಿ ದಿನಕ್ಕೆ 5 ಕೆ.ಜಿ ಚಿನ್ನ ಉತ್ಪಾದನೆ ಮಾಡಲಾಗುತ್ತಿತ್ತು. ಈಗ ಉತ್ಪಾದನೆ ಸ್ಧಗಿತವಾಗಿದ್ದರಿಂದ ಗಣಿ ಕಂಪನಿಗೆ ನಷ್ಟವಾಗುವುದಿಲ್ಲ. ಮುಂದಿನ ದಿನಗಳಲ್ಲಿ ಚಿನ್ನ ಉತ್ಪಾದನೆ ಹೆಚ್ಚಳ ಮಾಡಿ ನಷ್ಟ ಸರಿಪಡಿಸಲಾಗುವುದು’ ಎಂದು ಆಡಳಿತ ಮಂಡಳಿ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು