ಬುಧವಾರ, ಆಗಸ್ಟ್ 10, 2022
23 °C

‘ಜೆಡಿಎಸ್‌ನಿಂದ ರಾಜ್ಯದಲ್ಲಿ ಉತ್ತಮ ಆಡಳಿತ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಕಡಿಮೆ ಅವಧಿಯಲ್ಲಿ ಆಡಳಿತ ನಡೆಸಿದರೂ ರೈತರ ಸಾಲಮನ್ನಾ, ಸಾರಾಯಿ ನಿಷೇಧ, ಮಹಿಳೆಯರ, ವಿದ್ಯಾರ್ಥಿಗಳ ಪರ ಅನೇಕ ಯೋಜನೆಗಳನ್ನು ಜಾರಿಗೆ ತಂದು ಉತ್ತಮ ಆಡಳಿತ ನೀಡಿ ಗಮನ ಸೆಳೆದಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ವಿರುಪಾಕ್ಷಿ ಹೇಳಿದರು.

ನಗರದ ಕನ್ನಡ ಭವನದಲ್ಲಿ ಜಿಲ್ಲಾ ಜೆಡಿಎಸ್‌ನಿಂದ ಬುಧವಾರ ಏರ್ಪಡಿಸಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ನಿಮಿತ್ತ ‘ಕರ್ನಾಟಕ್ಕೆ ಕುಮಾರಣ್ಣ’ ಎನ್ನುವ ವಿಷಯ ಕುರಿತ ವಿಚಾರ ಸಂಕೀರಣದಲ್ಲಿ ಮಾತನಾಡಿದರು.

ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯದ ಪರಿಕಲ್ಪನೆ ಮೂಲಕ ದೀನ ದಲಿತರ, ಬಡವರ ಸಮಸ್ಯೆ ಆಲಿಸಿ ಪರಿಹಾರ ನೀಡಿದ್ದಾರೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ ಕುಮಾರಸ್ವಾಮಿ ಅವರ ಕೊಡುಗೆ ಅಪಾರವಾಗಿದೆ ಎಂದು ತಿಳಿಸಿದರು.

ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಎನ್. ಶಿವಶಂಕರ ಮಾತನಾಡಿ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರೈತರ ಸಮಸ್ಯೆಗಳನ್ನು ಆಲಿಸುವ ಮೂಲಕ ಯಶಸ್ವಿ ಆಡಳಿತ ನಡೆಸಿದರೂ ಚುನಾವಣೆಗಳಲ್ಲಿ ಜೆಡಿಎಸ್ ಪಕ್ಷಕ್ಕೆ ಹಿನ್ನಡೆಯಾಗುತ್ತಿರುವುದು ವಿಷಾದನೀಯ ಎಂದರು.

ಜನಪರ ಯೋಜನೆ, ಆಡಳಿತದ ಕುರಿತು ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿ ಪಕ್ಷದ ಲೋಪದೋಷಗಳನ್ನು ತಿದ್ದುವ ಮೂಲಕ ಪಕ್ಷವನ್ನು ಬಲಪಡಿಸಬೇಕಿದೆ. ಪಕ್ಷದಲ್ಲಿನ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿ ಮುಂಬರುವ
ವಿಧಾನಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿಯಾಗಲು ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಾಹಿತಿಗಳು, ರೈತ ಮುಖಂಡರು ಹಾಗೂ ಸಾರ್ವಜನಿಕರು ಕುಮಾರಸ್ವಾಮಿ ಅವರ ಕುರಿತು ಅನಿಸಿಕೆ ವ್ಯಕ್ತಪಡಿಸಿದರು.

ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಮಹಾಂತೇಶ ಪಾಟೀಲ ಅತ್ತನೂರು, ಮುಖಂಡ ಯೂಸೂಫ್ ಖಾನ್, ಬಿ.ತಿಮ್ಮರೆಡ್ಡಿ, ಎಂ.ಪವನ ಕುಮಾರ, ಹರೀಶ್ ನಾಡಗೌಡ, ಖಾಸಿಂ ನಾಯಕ, ಅಕ್ಬರ್ ನಾಗುಂಡಿ, ಜಂಬುನಾಥ ಯಾದವ, ದಾನಪ್ಪ ಯಾದವ, ರಾಮಕೃಷ್ಣ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು