ಮಾನ್ವಿ: ತಾಲ್ಲೂಕಿನ ಪೋತ್ನಾಳ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ತಾಯಂದಿರು ಹಾಗೂ ಮಕ್ಕಳಿಗೆ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ ಹಾಗೂ ಆರೋಗ್ಯ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಮಂಗಳವಾರ ಹಮ್ಮಿಕೊಳ್ಳಲಾಗಿತ್ತು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಮಾತನಾಡಿ, ‘ಮಕ್ಕಳಿಗೆ ಸಮಯಕ್ಕೆ ಸರಿಯಾಗಿ ಲಸಿಕೆಯನ್ನು ಹಾಕಿಸಬೇಕು. ಬಿಸಿಜಿ ಲಸಿಕೆ ಹಾಕಿಸುವುದರಿಂದ ಕ್ಷಯ, ಪೆಂಟಾವೆಲೆಂಟ್ ಲಸಿಕೆಯಿಂದ ಐದು ಮಾರಕ ರೋಗಗಳನ್ನು ತಡೆಗಟ್ಟಬಹುದು’ ಎಂದು ತಿಳಿಸಿದರು.

ಆರೋಗ್ಯ ನಿರೀಕ್ಷಣಾ ಅಧಿಕಾರಿ ಗುರುಶರಣ ಮಾತನಾಡಿ, ಸ್ವಚ್ಛತೆ ಬಗ್ಗೆ ತಿಳಿವಳಿಕೆ ಮೂಡಿಸಿದರು.

ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗ ಕವಿತಾ. ಆರೋಗ್ಯ ನಿರೀಕ್ಷಣಾ ಅಧಿಕಾರಿ ದೇವೇಂದ್ರಪ್ಪ, ಅಂಗನವಾಡಿ ಕಾರ್ಯಕರ್ತೆಯರಾದ ರೇಣುಕಾ, ದಾಕ್ಷಾಯಿಣಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.