ಕವಿತಾಳ: ‘ಪೌಷ್ಟಿಕ ಆಹಾರ ಸೇವನೆ ಮತ್ತು ನಿಯಮಿತ ಆರೋಗ್ಯ ತಪಾಸಣೆ ಮೂಲಕ ಗರ್ಭಿಣಿಯರು ಆರೋಗ್ಯ ಕಾಪಾಡಿಕೊಳ್ಳಬೇಕು. ದೈಹಿಕ ಚಟುವಟಿಕೆಗಳು ಸಹಜ ಹೆರಿಗೆಗೆ ಸಹಕಾರಿʼ ಎಂದು ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಯೋಜನೆ ವೈದ್ಯಾಧಿಕಾರಿ ಡಾ.ಶ್ರೀಧರ ಇಲ್ಲೂರು ಹೇಳಿದರು.

ಇಲ್ಲಿಗೆ ಸಮೀಪದ ಗಂಗಾನಗರ ಕ್ಯಾಂಪ್ ಮತ್ತು ಲಕ್ಷ್ಮಿ ನಾರಾಯಣ ಕ್ಯಾಂಪ್ಗಳಲ್ಲಿ ಶನಿವಾರ ನಡೆದ ಗರ್ಭಿಣಿ ಹಾಗೂ ಬಾಣಂತಿಯರ ಆರೋಗ್ಯ ತಪಾಸಣೆ ಶಿಬಿರದಲ್ಲಿ ಅವರು ಮಾತನಾಡಿದರು.

‘ತರಕಾರಿ, ಬೇಯಿಸಿದ ಮೊಟ್ಟೆ, ಮೊಳಕೆ ಕಾಳು, ಹಣ್ಣುಗಳ ಸೇವನೆ ಮೂಲಕ ರಕ್ತಹೀನತೆ ಉಂಟಾಗದಂತೆ ಎಚ್ಚರ ವಹಿಸಬೇಕು. ಹೆರಿಗೆ ನಂತರ ಮಗುವಿಗೆ ಎದೆಹಾಲು ಉಣಿಸುವ ಮೂಲಕ ಮಗುವಿನ ಆರೋಗ್ಯ ಕಾಪಾಡಬೇಕು’ ಎಂದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ, ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ಸುಮತ್ರಾ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.