ಮಾನ್ವಿ: ತಾಲ್ಲೂಕಿನ ಕಾತರಕಿ ಹಾಗೂ ಸಾದಾಪುರ ಗ್ರಾಮಗಳ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ವ್ಯಾಪ್ತಿಯ ರಬ್ಬಣಕಲ್, ಕಾತರಕಿ, ದದ್ದಲ ಹಾಗೂ ಸಾದಾಪುರ ಗ್ರಾಮಗಳಲ್ಲಿ ಶನಿವಾರ ಆರೋಗ್ಯ ಇಲಾಖೆಯ ವತಿಯಿಂದ ಗರ್ಭಿಣಿಯರು ಹಾಗೂ ಬಾಣಂತಿಯರ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಬಸಯ್ಯ ಮಾತನಾಡಿ, 'ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಹಲವು ಉತ್ತಮ ಆರೋಗ್ಯ ಸೇವೆಗಳನ್ನು ನೀಡಲಾಗುತ್ತಿದೆ. ಮಾತೃತ್ವ ಆರೋಗ್ಯ ತಪಾಸಣೆ ಶಿಬಿರ ಹಾಗೂ ಪ್ರಧಾನಮಂತ್ರಿ ಮಾತೃತ್ವ ಸುರಕ್ಷಿತ ಯೋಜನೆ ಅಡಿಯಲ್ಲಿ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲಾಗುತ್ತದೆ. ಪ್ರತಿ ಗುರುವಾರ ಗರ್ಭಿಣಿಯರಿಗೆ ಟಿಟಿ ಲಸಿಕೆ ಹಾಕಲಾಗುವುದು. ಆರೋಗ್ಯದ ಬೆಳವಣಿಗೆಗೆ ಕಬ್ಬಿಣಾಂಶ ಹಾಗೂ ಕ್ಯಾಲ್ಸಿಯಂ ಮಾತ್ರೆ ನೀಡಲಾಗುತ್ತದೆ' ಎಂದು ತಿಳಿಸಿದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಮಾತನಾಡಿ, 'ಗರ್ಭಿಣಿ ಮತ್ತು ಬಾಣಂತಿ ಅವಧಿಯಲ್ಲಿ ಬಹಳಷ್ಟು ಆಪಾಯಗಳು ಬರುವ ಸಾಧ್ಯತೆ ಇರುತ್ತದೆ. ಗರ್ಭಿಣಿಯರು ಒಂಬತ್ತು ತಿಂಗಳ ಅವಧಿಯಲ್ಲಿ ಕನಿಷ್ಠ ನಾಲ್ಕು ಬಾರಿ ವೈದ್ಯರಲ್ಲಿ ಆರೋಗ್ಯ ತಪಾಸಣೆಯ ಆಗತ್ಯವಿದೆ. ರಕ್ತಹೀನತೆ, ಅಧಿಕ ರಕ್ತದೊತ್ತಡ, ಅಧಿಕ ಜ್ವರ, ಹೆರಿಗೆ ನೋವು ಕಾಮಾಲೆ ಅಪಾಯಕಾರಿ ಲಕ್ಷಣಗಳು. ಈ ಬಗ್ಗೆ ಜಾಗೃತಿ ಅಗತ್ಯ' ಎಂದರು.

ಸಮುದಾಯ ಆರೋಗ್ಯ ಅಧಿಕಾರಿಗಳಾದ. ಮಂಜುಳಾ, ಎಂ.ಡಿ. ಅತೀಫ್, ಪಾಂಡು ಪ್ರಾಥಮಿಕ ಆರೋಗ್ಯ ಸುರಕ್ಷಿತ ಅಧಿಕಾರಿ ಉಷಾ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.