ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಣ ಬಿಸಿಲು: ಆರೋಗ್ಯ ಕಾಪಾಡಿಕೊಳ್ಳಲು ವೈದ್ಯರ ಸಲಹೆ

Published 13 ಮಾರ್ಚ್ 2024, 15:24 IST
Last Updated 13 ಮಾರ್ಚ್ 2024, 15:24 IST
ಅಕ್ಷರ ಗಾತ್ರ

ರಾಯಚೂರು: ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನಲೆಯಲ್ಲಿ ಹೀಟ್ ವೇವ್(ಶಾಖದ ಹೊಡೆತ), ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಡಾ.ಎಲ್.ಚಂದ್ರಶೇಖರ ನಾಯಕ ಎಚ್ಚರಿಸಿದ್ದಾರೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಮುಂಜಾಗೃತಾ ಕ್ರಮವಾಗಿ ಆರೋಗ್ಯ ಕಾಪಾಡಿಕೊಳ್ಳಲು ನೀಡಿರುವ ಸಲಹೆಗಳನ್ನು ಸಾರ್ವಜನಿಕರು ಅನುಸರಿಸಬೇಕು ಎಂದು ತಿಳಿಸಿದ್ದಾರೆ.

ವೈದ್ಯರ ಸಲಹೆಗಳೇನು?

  • ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಹೊರಾಂಗಣ ದೈಹಿಕ ಚಟುವಟಿಕೆಗಳನ್ನು ಕಡಿಮೆ ಮಾಡಲು ಪ್ರಯತ್ನಿಸಬೇಕು.

  • ಸಾರ್ವಜನಿಕರು ಬಿಸಿಲು ದಿನಗಳಲ್ಲಿ ಕೊಡೆ, ಛತ್ರಿ ಬಳಸಬೇಕು, ತಂಪಾದ ಸ್ಥಳಗಳಲ್ಲಿ ಉಳಿಯಲು ಪ್ರಯತ್ನಿಸಬೇಕು.

  • ತೆಳುವಾದ ಸಡಿಲವಾದ ಹತ್ತಿಯ ಉಡುಪುಗಳನ್ನು ಧರಿಸಿ, ಆದಷ್ಟು ಬಿಳಿಬಣ್ಣದ ಬಟ್ಟೆಗಳನ್ನು ಬಳಸುವುದು ಉತ್ತಮ. ಹತ್ತಿಯ ಅಥವಾ ಟರ್ಬನ್ ಟೋಪಿ, ಕೂಲಿಂಗ್ ಗ್ಲಾಸ್ ಧರಿಸಬೇಕು.

  • ಸಾಕಷ್ಟು ನೀರು ಕುಡಿಯಬೇಕು. ಮಜ್ಜಿಗೆ ಮತ್ತು ಗ್ಲೂಕೋಸ್, ಒಆರ್.ಎಸ್ ನಂತಹ ದ್ರವ ಪದಾರ್ಥಗಳನ್ನು ಉಪಯೋಗಿಸಬೇಕು.

  • ಮಕ್ಕಳು ಮತ್ತು ಹಿರಿಯ ನಾಗರಿಕರು ಹೆಚ್ಚು ನೀರು ಕುಡಿಯಬೇಕು

  • ಕೊಠಡಿ ತಾಪಮಾನವನ್ನು ಕಡಿಮೆ ಮಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

  • ಹೀಟ್ ಸ್ಟೋಕ್ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಯನ್ನು ತಂಪಾದ ಜಾಗಕ್ಕೆ ಸ್ಥಳಾಂತರಿಸಬೇಕು.

  • ಶಾಖದ ಹೊಡೆತದಿಂದ ಬಳಲುತ್ತಿರುವ ವ್ಯಕ್ತಿಯು ಕನಿಷ್ಠ ಬಟ್ಟೆಯನ್ನು ಹೊಂದಿರುವಂತೆ ನೋಡಿಕೊಂಡು, ವ್ಯಕ್ತಿಗೆ ತಣ್ಣೀರಿನಿಂದ ಸ್ಪಾಂಜ್ ಮಾಡಬೇಕು ಅಥವಾ ಐಸ್ ಪ್ಯಾಕ್ ಗಳನ್ನು ಉಪಯೋಗಿಸಬಹುದು ಅಥವಾ ವ್ಯಕ್ತಿಯನ್ನು ಐಸ್ ಬ್ಲಾಕ್‍ಗಳ ಮಧ್ಯ ಇಡಬಹುದು

  • ಹೀಟ್ ವೇವ್ ಸ್ಟೋಕ್‍ಗೆ ಒಳಗಾದ ಯಾವುದೇ ಸುಧಾರಣೆ ಕಂಡುಬರದಿದ್ದರೆ, ಅವರನ್ನು ತಕ್ಷಣ ಆಸ್ಪತ್ರೆಗೆ ಸ್ಥಳಾಂತರಿಸಬೇಕು.

  • ಬೇಸಿಗೆಯಲ್ಲಿ ಹೊರಗಿನಿಂದ ಬಂದ ತಕ್ಷಣ ನೀರು, ಒಆರ್‍ಎಸ್ ಮಜ್ಜಿಗೆಯಂತಹ ಪಾನಿಯಾಗಳನ್ನು ಬಳಸಬಹುದು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT