ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಮಿ ನಂಬಿ ಬದುಕುವ ರಡ್ಡಿ ಸಮಾಜ: ಸಚಿವ ಶಂಕರ ಪಾಟೀಲ ಮುನೇನಕೊಪ್ಪ

ಮಹಾಸಾದ್ವಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ 600ನೇ ಜಯಂತಿ ಆಚರಣೆ
Last Updated 10 ಮೇ 2022, 13:40 IST
ಅಕ್ಷರ ಗಾತ್ರ

ರಾಯಚೂರು: ರಡ್ಡಿ ಸಮಾಜವು ಯಾರನ್ನು ಆಶ್ರಯಿಸಿಲ್ಲ. ಭೂಮಿತಾಯಿ ನಂಬಿ ಶ್ರಮದಿಂದ ಬದುಕು ಕಟ್ಟಿಕೊಂಡಿರುವ ಸಮಾಜ ಇದು. ಈ ಸಮಾಜಕ್ಕೆ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ತಾಯಿ ಆಶೀರ್ವಾದ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.

ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಂಗಳವಾರ ಆಯೋಜಿಸಿದ್ದ ಮಹಾಸಾದ್ವಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ ರಾಜ್ಯಮಟ್ಟದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಡ್ಡಿ ಸಮಾಜ ಇನ್ನೊಬ್ಬರಿಗೆ ಕೇಡು ಬಯಸದೆ ಬೇರೆ ಸಮಾಜದ ಜನರನ್ನು ಮೇಲೆತ್ತುವ ವಿಚಾರ ಹೊಂದಿರುವುದು ಬಹಳ ದೊಡ್ಡ ಗುಣ. ಬಹುತೇಕ ಎಲ್ಲರೂ ಕೃಷಿ ಆಧರಿಸಿ ಜೀವನ ನಡೆಸುತ್ತಿದ್ದಾರೆ. ಎಲ್ಲರೂ ಬಸವಣ್ಣನವರು ಹೇಳಿರುವಂತೆ ಇವನ್ಯಾರವ ಇವನ್ಯಾರವ ಎನ್ನದೇ ಜೀವನ ಕಟ್ಟಿಕೊಳ್ಳಬೇಕಾಗಿದೆ ಎಂದರು.

ಗಣಿ ಮತ್ತು ಭೂವಿಜ್ಞಾನ ಸಚಿವ ಹಾಲಪ್ಪ ಆಚಾರ್‌ ಮಾತನಾಡಿ, ಸಮಾಜದ ಅಂಕುಡೊಂಕು ತಿದ್ದಿದ ಮಹಾಸಾಧ್ವಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮನ ಆಚಾರ ಮತ್ತು ವಿಚಾರಗಳು ಪ್ರತಿಯೊಬ್ಬರಿಗೂ ದಾರಿದೀಪವಾಗಿದ್ದು, ಸಮಾಜವನ್ನು ತಿದ್ದುವ ಮೂಲಕ ಸಮಾಜದ ನಕ್ಷತ್ರವಾಗಿದ್ದಾರೆ ಎಂದು ಹೇಳಿದರು.

ರಡ್ಡಿ ಸಮಾಜಕ್ಕೆ ಮಲ್ಲಮ್ಮ ಬಂಗಾರದ ಕಡ್ಡಿಯಾಗಿದ್ದಾರೆ. ರಾಜ್ಯದಲ್ಲಿ ಮಾತ್ರವಲ್ಲದೇ ಅಂಧ್ರಪ್ರದೇಶ ಹಾಗೂ ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳಲ್ಲಿ ಹೇಮರಡ್ಡಿ ಮಲ್ಲಮ್ಮ ಸಮಾಜದವರು ನೆಲೆ ಕಂಡುಕೊಂಡಿದ್ದು, ಸಮಾಜದ ಮಹಿಳೆಯರು ಹೆಚ್ಚಾಗಿ ಶಿಕ್ಷಣವಂತರಾಗುವ ಜೊತೆಗೆ ನಮ್ಮ ಸಮಾಜದ ಆಚಾರ-ವಿಚಾರವನ್ನು ಮರೆಯದೆ ಮುಂದಿನ ಪೀಳಿಗೆಗೆ ತಿಳಿಸಬೇಕು ಎಂದರು.

ಸಂಸದ ರಾಜಾ ಅಮರೇಶ್ವರ ನಾಯಕ ಮಾತನಾಡಿ, 12 ನೇ ಶತಮಾನದ ಬಳಿಕ ಸಮಾಜದಲ್ಲಿ ಅನೇಕ ಬದಲಾವಣೆಗಳಾದವು. ಶರಣರು ಸಮಾಜದ ಅಂಕುಡೊ‌ಂಕು ತಿದ್ದುವ ಕೆಲಸ ಮಾಡಿದ್ದಾರೆ‌. ಅಂಥವರಲ್ಲಿ ಹೇಮರಡ್ಡಿ ಮಲ್ಲಮ್ಮ ಅವರು ಪ್ರಮುಖರಾಗಿದ್ದಾರೆ. ರೆಡ್ಡಿ ಸಮಾಜವು ಎಲ್ಲ ಸಮಾಜಕ್ಕೂ ಹಿರಿಯ ಇದ್ದಂತೆ, ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ಶಕ್ತಿ ಇದೆ ಎಂದು ಹೇಳಿದರು.

ಕೃಷ ನಂಬಿರುವ ರಡ್ಡಿ ಸಮುದಾಯಕ್ಕೆ ಮತ್ತು ರಾಯಚೂರು ಜಿಲ್ಲೆಗೆ ಅನುಕೂಲ ಕಲ್ಪಿಸಲು ಜವಳಿ ಪಾರ್ಕ್ ಸ್ಥಾಪಿಸುವುದು ಅಗತ್ಯವಾಗಿದೆ. ಉಸ್ತುವಾರಿ ಸಚಿವರು ಒಂದು ಸಾವಿರ ಎಕರೆ ಜಮೀನು ಗುರುತಿಸುವುದಕ್ಕೆ ಕ್ರಮ ಕೈಗೊಂಡು, ಪ್ರಸ್ತಾವನೆ ಕಳಿಹಿಸುವಂತೆ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ತಿಳಿಸಿದರು.

ಪ್ರಾಸ್ತಾವಿಕ ಮಾತನಾಡಿದ ಹೇಮವೇಮ ಸಮಾಜದ ಜಿಲ್ಲಾ ಅಧ್ಯಕ್ಷ ಡಾ.ಬಸನಗೌಡ ಅವರು, ರಡ್ಡಿ ಸಮಾಜದವರು ಭಕ್ತಿಭಾವ ಹಾಗೂ ದಾನ ಪರಂಪರೆ ಮುಂದುವರಿಸಿಕೊಂಡು ಹೋಗಬೇಕು. ಹೇಮರಡ್ಡಿ ಮಲ್ಲಮ್ಮ‌ ಅವರಿಗೆ ಸೊಸೆಯಾಗಿ ಸಾಕಷ್ಟು ಕಷ್ಟ ಅನುಭವಿಸಿದರು. ದನ ಕಾಯಲು ಹೋಗುತ್ತಿದ್ದ ಮಲ್ಲಮ್ಮ, ತನ್ನ ಊಟವನ್ನು ಸಾಧುವೊಬ್ಬರಿಗೆ ನೀಡುತ್ತಿದ್ದರು. ಒಂದು ದಿನ ಸಾಕ್ಷಾತ್ ಶ್ರೀಶೈಲ ಮಲ್ಲಯ್ಯ ಪ್ರತ್ಯಕ್ಷವಾಗಿ ವರ ಕೊಟ್ಟಿರುವ ವಿಚಾರ ಎಲ್ಲರಿಗೂ ತಿಳಿದಿದೆ’ ಎಂದರು.

ಶಾಸಕರಾದ ವೆಂಕಟರಾವ್ ನಾಡಗೌಡ, ರಾಜಾ ವೆಂಕಟಪ್ಪ ನಾಯಕ, ಬಸನಗೌಡ ದದ್ದಲ ಹಾಗೂ ಅಧ್ಯಕ್ಷತೆ ವಹಿಸಿದ್ದ ಶಾಸಕ ಡಾ.ಶಿವರಾಜ ಪಾಟೀಲ, ಮಾಜಿ ಕೇಂದ್ರ ಸಚಿವ ಬಸವರಾಜ ಪಾಟೀಲ ಅನ್ವರಿ ಮಾತನಾಡಿದರು.

ವಿಧಾನ ಪರಿಷತ್ ಸದಸ್ಯರಾದ ಶಶೀಲ್ ನಮೋಶಿ, ಶರಣಗೌಡ ಬಯ್ಯಾಪುರ, ಜಿಲ್ಲಾಧಿಕಾರಿ ಚಂದ್ರಶೇಖರ್ ಎಲ್. ನಾಯಕ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೂರ್ ಜಹಾರ ಖಾನಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಮಂಗಳಾ ನಾಯಕ, ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ಎಂ. ವೀರನಗೌಡ, ಮುನಿರಾಬಾದ್ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ, ಆರ್‌ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ವಿಶ್ವನಾಥ ಪಾಟೀಲ, ನಗರಸಭೆ ಅಧ್ಯಕ್ಷೆ ಲಲಿತಾ ಆಂಜನೇಯ್ಯ ಕಡಗೋಲ ಮತ್ತಿತರರು ಇದ್ದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್‌.ದುರುಗೇಶ ಸ್ವಾಗತಿಸಿದರು. ಗುಲ್ಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಶರಣಬಸವ ಜೋಳದಡಗಿ, ಶಿಕ್ಷಕ ಬಸವರಾಜ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT