ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಸ್ಕಿ: ಹಿರೇ ಹಳ್ಳದ ತಡೆಗೋಡೆ ಕಾಮಗಾರಿಗೆ ಚಾಲನೆ

Published : 11 ಸೆಪ್ಟೆಂಬರ್ 2024, 13:13 IST
Last Updated : 11 ಸೆಪ್ಟೆಂಬರ್ 2024, 13:13 IST
ಫಾಲೋ ಮಾಡಿ
Comments

ಮಸ್ಕಿ: ‘ತಾಲ್ಲೂಕಿನ ಹಿರೇಕಡಬೂರು-ಚಿಕ್ಕಕಡಬೂರಿನ ಹಳ್ಳದ ತಡೆಗೋಡೆ ನಿರ್ಮಾಣ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ’ ಎಂದು ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್.ಬಸನಗೌಡ ತುರುವಿಹಾಳ ತಿಳಿಸಿದರು.

ಹಿರೇಕಡಬೂರು ಗ್ರಾಮದಲ್ಲಿ ಬುಧವಾರ ಹಳ್ಳದ ತಡೆಗೋಡೆ ನಿರ್ಮಾಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಹಳ್ಳದ ತಡೆಗೋಡೆ ನಿರ್ಮಾಣಕ್ಕೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ₹55 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ. ಕಾಮಗಾರಿ ಜವಾಬ್ದಾರಿಯನ್ನು ಲೋಕೋಪಯೋಗಿ ಇಲಾಖೆಗೆ ವಹಿಸಲಾಗಿದೆ’ ಎಂದು ತಿಳಿಸಿದರು.

‘ಗುತ್ತಿಗೆದಾರರು ನಿಗದಿತ ಸಮಯದಲ್ಲಿ ಉತ್ತಮ ಗುಣಮಟ್ಟದ ಕೆಲಸ ನಿರ್ವಹಿಸುವ ಮೂಲಕ ಸರ್ಕಾರದ ಅನುದಾನ ಸಮರ್ಪಕವಾಗಿ ಬಳಕೆಯಾಗುವಂತೆ ಮಾಡಬೇಕು’ ಎಂದು ತಿಳಿಸಿದರು.

ಮುಖಂಡ ಅಯ್ಯನಗೌಡ, ದೇವಪ್ಪ, ರಮೇಶ ಕರೆಕುರಿ, ಹನುಮಂತ, ಶಿವುಗ್ಯಾನಪ್ಪ, ಮಲ್ಲಯ್ಯ, ಲಕ್ಷ್ಮಣ, ಅಭಿಗೌಡ, ಈರಪ್ಪ ಇತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT