ಪ್ರಜಾವಾಣಿ ವಾರ್ತೆ

ಸಿಂಧನೂರು: ಈಡಿಗ, ಬಿಲ್ಲವ, ನಾಮಧಾರಿ, ದೀವರ, ತೀಯ ಸೇರಿದಂತೆ 26 ಪಂಗಡಗಳನ್ನು ಹೊಂದಿರುವ ಸಮುದಾಯದ 18 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜನವರಿ 6ರಿಂದ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠ ಕರದಾಳದಿಂದ ಬೆಂಗಳೂರುವರೆಗೆ 41 ದಿನಗಳ ಕಾಲ 700 ಕಿ.ಮೀ.ವರೆಗೆ ಐತಿಹಾಸಿಕ ಪಾದಯಾತ್ರೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಕರದಾಳ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠದ ಪ್ರಣವಾನಂದ ಸ್ವಾಮೀಜಿ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

‘ಬ್ರಹ್ಮಶ್ರೀ ನಾರಯಣ ಗುರು ಅಭಿವೃದ್ಧಿ ನಿಗಮಕ್ಕೆ ಕೂಡಲೇ ₹ 500 ಕೋಟಿ ಬಿಡುಗಡೆ ಮಾಡಬೇಕು. ಕುಲಕಸುಬು ಕಳೆದುಕೊಂಡ ಕಲ್ಯಾಣ ಕರ್ನಾಟಕ ಭಾಗದ ಸಂತ್ರಸ್ತ ಈಡಿಗರಿಗೆ 5 ಎಕರೆ ಜಮೀನು ಪ್ರತಿ ಕುಟುಂಬಕ್ಕೆ ಮಂಜೂರು ಮಾಡಬೇಕು. ಸಮಾಜವನ್ನು ಈಗಿರುವ 2ಎ ಯಿಂದ ಎಸ್ಟಿ ಮೀಸಲಾತಿಗೆ ಸೇರಿಸಲು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಬೆಂಗಳೂರಿನ ವಿಧಾನಸೌಧದ ಎದುರುಗಡೆ ನಾರಾಯಣ ಗುರು ಪುತ್ಥಳಿ ಸ್ಥಾಪಿಸಬೇಕು’ ಎಂದು ಮನವಿ ಮಾಡಿದರು.

ಆಶ್ರಯ ಮತ್ತು ವಸತಿ ಯೋಜನೆಯಲ್ಲಿ ಸಮಾಜಕ್ಕೆ ಪ್ರತ್ಯೇಕವಾಗಿ 25 ಸಾವಿರ ಮನೆಗಳನ್ನು ಮಂಜೂರುಗೊಳಿಸಬೇಕು. ರಾಜ್ಯದ ಎಲ್ಲ ತಾಲ್ಲೂಕು, ಜಿಲ್ಲಾ ಕೇಂದ್ರಗಳಲ್ಲಿಯೂ ಬ್ರಹ್ಮಶ್ರೀ ನಾರಾಯಣ ಗುರು ಭವನ ನಿರ್ಮಿಸುವುದಕ್ಕೆ ಭೂಮಿ ಮಂಜೂರು ಮಾಡಬೇಕು. ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಸಮುದಾಯದ ಟ್ರಸ್ಟ್ವೊಂದಕ್ಕೆ ಮೆಡಿಕಲ್ ಕಾಲೇಜು ಮಂಜೂರಾತಿ ನೀಡಬೇಕು. ಶಿವಮೊಗ್ಗ, ಮಂಗಳೂರು, ಕಾರವಾರ, ಉಡುಪಿ ಪ್ರತಿ ಜಿಲ್ಲೆಯಲ್ಲಿ 5 ಎಕರೆ ಜಮೀನು ಮಂಜೂರು ಮಾಡಿ ಐಎಎಸ್, ಐಪಿಎಸ್, ಕೆಎಎಸ್ ತರಬೇತಿ ಕೇಂದ್ರಗಳನ್ನು ಸ್ಥಾಪಿಸಬೇಕು. ಈ ಎಲ್ಲ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರ ಮುಂದಾಗಬೇಕು’ ಎಂದು ಒತ್ತಾಯಿಸಿ ಐತಿಹಾಸಿಕ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ವಿವರಿಸಿದರು.

ಆರ್ಯ ಈಡಿಗ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಸ್.ಶ್ರೀನಿವಾಸಗೌಡ, ಮುಖಂಡರಾದ ಆರ್.ಪದ್ಮನಾಭ, ಎಂ.ಎಸ್.ರಾಜು, ಆರ್.ಸುರೇಂದ್ರ, ಸತ್ಯನಾರಾಯಣ, ಪ್ರಾಣೇಶ ಉಪಸ್ಥಿತರಿದ್ದರು.

ಸಮಾಜದ 18 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಮುಂದಾಗದಿದ್ದರೆ ಫೆ.12 ರಿಂದ ಬೆಂಗಳೂರಿನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು
ಪ್ರಣವಾನಂದ ಸ್ವಾಮೀಜಿ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠ ಕರದಾಳ