ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌ಕೆಆರ್‌ಡಿಬಿ ಕಾಮಗಾರಿ ವೇಗ ಹೆಚ್ಚಿಸಿ: ಸಿಇಒ

Last Updated 13 ಜುಲೈ 2019, 14:14 IST
ಅಕ್ಷರ ಗಾತ್ರ

ರಾಯಚೂರು: ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಕೈಗೊಂಡಿರುವ ಕಾಮಗಾರಿಗಳ ವೇಗ ಹೆಚ್ಚಿಸಬೇಕು. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ರಾಯಚೂರು ತುಂಬಾ ಹಿಂದೆ ಬಿದ್ದಿದೆ. ಆದ್ದರಿಂದ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಂಡು ಅಂತರ್ಜಾಲದಲ್ಲಿ ವರದಿ ಅಳವಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀಕಾಂತರೆಡ್ಡಿ ಹೇಳಿದರು.

ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.

ಅನುದಾನ ಬಿಡುಗಡೆ ಮಾಡಲಾಗಿದ್ದರೂ, ಕಾಮಗಾರಿಗಳು ಇನ್ನೂ ಆರಂಭಗೊಳ್ಳದೇ ಇರುವುದು ಸಮಂಜಸವಲ್ಲ. ಕೈಗೆತ್ತಿಕೊಂಡ ಕಾಮಗಾರಿಗಳು ತ್ವರಿತವಾಗಿ ನಡೆಯುತ್ತಿಲ್ಲ. ವಿಳಂಬ ಧೋರಣೆ ಅನುಸರಿಸದೇ ಕಾಲಮಿತಿಯಲ್ಲಿ ಕೆಲಸಗಳನ್ನು ಮಾಡಬೇಕು ಎಂದರು.

ಅಪೂರ್ಣ ಕಾಮಗಾರಿಗಳ ಸಂಖ್ಯೆ ಅಧಿಕವಾಗಿದ್ದು, ತ್ವರಿತವಾಗಿ ಪೂರ್ಣಗೊಳಿಸಬೇಕು. ಹರಿಜನವಾಡ ಬಡಾವಣೆ, ಯಕ್ಲಾಸಪುರ, ಮಾನ್ವಿ ತಾಲ್ಲೂಕಿನ ಕುರ್ಡಿಯಲ್ಲಿ ಶೌಚಾಲಯ ಕಾಮಗಾರಿಗೆ ಅನುದಾನ ನೀಡಿದ್ದರೂ ಕೆಲಸವಾಗಿಲ್ಲ. ದೇವದುರ್ಗದ ಬಾಲಕಿಯರ ವಸತಿ ನಿಲಯ ಕಾಮಗಾರಿ ಆಗಸ್ಟ್ 30ರೊಳಗೆ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು.

ನಿಜಲಿಂಗಪ್ಪ ಕಾಲೊನಿಯ ₹50 ಲಕ್ಷದ ಸಿಸಿ ರಸ್ತೆ ಕಾಮಗಾರಿ, ಮಾನ್ವಿ ತಾಲ್ಲೂಕಿನ ವಲ್ಕಂದಿನ್ನಿ– ಕುರ್ಡಿ ರಸ್ತೆ ಕಾಮಗಾರಿಗೆ ಅನುದಾನ ನೀಡಿದ್ದರೂ ಕಾಮಗಾರಿ ಏಕೆ ಆಗಿಲ್ಲ. ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಇಲ್ಲದಿದ್ದರೆ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಉಪ ಕಾರ್ಯದರ್ಶಿ ಮಹ್ಮದ್ ಯೂಸೂಫ್, ಯೋಜನಾಧಿಕಾರಿ ಟಿ.ರೋಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT