ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಸ್ಕಿ: ಡಿಸೆಂಬರ್ 23ಕ್ಕೆ ಮೆಟ್ರಿಕ್ ನಂತರದ ವಸತಿ ನಿಲಯದ ಉದ್ಘಾಟನೆ

Published 17 ಡಿಸೆಂಬರ್ 2023, 13:54 IST
Last Updated 17 ಡಿಸೆಂಬರ್ 2023, 13:54 IST
ಅಕ್ಷರ ಗಾತ್ರ

ಮಸ್ಕಿ: ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ಉದ್ಘಾಟನೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ.

ಈ ಕುರಿತು ‘ಪ್ರಜಾವಾಣಿ’ಯಲ್ಲಿ ವರದಿ ಪ್ರಕಟವಾಗಿತ್ತು. ಬಳಿಕ ಶಾಸಕ ಆರ್.ಬಸನಗೌಡ ತುರುವಿಹಾಳ ವಿದ್ಯಾರ್ಥಿಗಳನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಂಡಿದ್ದರು. ಇದೀಗ ನೂತನ ಕಟ್ಟಡ ಉದ್ಘಾಟನೆಗೆ ಶಾಸಕರು ಕ್ರಮ ಕೈಗೊಂಡಿದ್ದಾರೆ.

ಡಿಸೆಂಬರ್ 23 ರಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ನೂತನ ಕಟ್ಟಡ ಉದ್ಘಾಟಿಸುವರು. ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪ, ಸಚಿವ ಎನ್.ಎಸ್.ಬೋಸರಾಜು ಅತಿಥಿಗಳಾಗಿ ಭಾಗವಹಿಸುವರು.

ಶಾಸಕ ಆರ್.ಬಸನಗೌಡ ತುರುವಿಹಾಳ ಅಧ್ಯಕ್ಷತೆ ವಹಿಸಲಿದ್ದು, ಸಂಸದರಾದ ಕರಡಿ ಸಂಗಣ್ಣ, ರಾಜಾ ಅಮರೇಶ್ವರ ನಾಯಕ ಸೇರಿದಂತೆ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ತಿನ ಸದಸ್ಯರು, ಜಿಲ್ಲಾಧಿಕಾರಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯು ₹5 ಕೋಟಿ ವೆಚ್ಚದಲ್ಲಿ ಪಟ್ಟಣದ ಸಾನಬಾಳ ರಸ್ತೆಯಲ್ಲಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ಕಟ್ಟಡವನ್ನು ನಿರ್ಮಿಸಿದೆ. ಕಟ್ಟಡ ಪೂರ್ಣಗೊಂಡು ಹಲವಾರು ತಿಂಗಳಾಗಿದ್ದರೂ ಉದ್ಘಾಟನೆಗೆ ಮುಹೂರ್ತ ನಿಗದಿಯಾಗಿರಲಿಲ್ಲ. ಖಾಸಗಿ ಕಟ್ಟಡದಲ್ಲಿ ವಿದ್ಯಾರ್ಥಿಗಳು ವಾಸಿಸುತ್ತಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT