ಭಾನುವಾರ, ಜನವರಿ 16, 2022
28 °C

‘ಮೇಲ್ವಿಚಾರಕಿಯನ್ನು ಮರು ನೇಮಕ ಮಾಡಿ’

ಪ್ರಜಾವಾಣಿವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ವೃತ್ತಿಪರ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಹಾಗೂ ಎಂಜಿನಿಯರಿಂಗ್ ಬಾಲಕಿಯರ ವಸತಿ ನಿಲಯದ ಮೇಲ್ವಿಚಾರಕಿ ಪವಿತ್ರ ಸಿ.ಕೆ. ಅವರನ್ನು ಮರುನೇಮಕ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿಯ ಮುಂದೆ ವಸತಿ ನಿಲಯದ ವಿದ್ಯಾರ್ಥಿನಿಯರು ಸೋಮವಾರ ಪ್ರತಿಭಟನೆ ನಡೆಸಿ ಕಚೇರಿಗೆ ಮನವಿ ಸಲ್ಲಿಸಿದರು.

ಬಿಸಿಎಂ ವೃತ್ತಿಪರ, ಎಂಜಿನಿಯರಿಂಗ್ ಬಾಲಕಿಯರ ವಸತಿ ನಿಲಯದಲ್ಲಿ ಮೇಲ್ವಿಚಾರಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಿ.ಕೆ ಪವಿತ್ರ ಅವರು ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುತ್ತಿದ್ದರು. ವಿದ್ಯಾರ್ಥಿಗಳ ಜೊತೆ ಅನೋನ್ಯವಾಗಿ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು.

ಏಕಾಏಕಿ ಅವರನ್ನು ಮೂಲ ಕೆಲಸಕ್ಕೆ ಕಳುಹಿಸಿದ್ದು ಸರಿಯಲ್ಲ. ಕೂಡಲೇ ಅವರನ್ನು ಮರು ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿ ಜ್ಯೋತಿ ಪಾಟೀಲ, ಭಾಗ್ಯ, ಅನ್ನಪೂರ್ಣ, ಗಾಯಿತ್ರಿ, ರಾಧಿಕಾ, ಶಿವಗಂಗಮ್ಮ, ಹನುಮಂತಿ, ಇಂದುಪ್ರಿಯಾ, ಭಾರ್ಗವಿ, ಭವ್ಯ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.