ಬುಧವಾರ, ನವೆಂಬರ್ 25, 2020
24 °C

ವಸತಿ ಗೃಹ ನಿರ್ಮಾಣಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಾನ್ವಿ: ತಾಲ್ಲೂಕಿನ ತಾಲ್ಲೂಕಿನ ಹಿರೇಕೊಟ್ನೇಕಲ್ ಗ್ರಾಮದಲ್ಲಿ ಶನಿವಾರ ಆರೋಗ್ಯ ಇಲಾಖೆಯ ಸಿಬ್ಬಂದಿ ವಸತಿ ಗೃಹ ನಿರ್ಮಾಣ ಕಾಮಗಾರಿಗೆ ಶಾಸಕ ರಾಜಾ ವೆಂಕಟಪ್ಪ ನಾಯಕ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ‘2019-20ನೇ ಸಾಲಿನ ಆರೋಗ್ಯ ಇಲಾಖೆಯ ಎಸ್‍ಟಿಪಿ ಯೋಜನೆ ಅಡಿಯಲ್ಲಿ ₹ 1 ಕೋಟಿ ವೆಚ್ಚದಲ್ಲಿ ಸಿಬ್ಬಂದಿ ವರ್ಗದವರಿಗೆ ವಸತಿ ಗೃಹಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಗುತ್ತಿಗೆದಾರರು ಮತ್ತು ಅಧಿಕಾರಿಗಳು ಗುಣಮಟ್ಟದ ಕಾಮಗಾರಿ ನಿರ್ವಹಣೆಗೆ ಗಮನಹರಿಸಬೇಕು. ಹಿರೇಕೊಟ್ನೇಕಲ್ ಗ್ರಾಮದಲ್ಲಿ ಇನ್ನೂ ಹೆಚ್ಚಿನ ಸೌಕರ್ಯಗಳನ್ನು ಕಲ್ಪಿಸಲಾಗುವುದು’ ಎಂದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರಯ್ಯ, ಜೆಡಿಎಸ್ ಪಕ್ಷದ ಮುಖಂಡರಾದ ರಾಜಾ ರಾಮಚಂದ್ರ ನಾಯಕ, ಖಲೀಲ್ ಖುರೇಷಿ, ವೆಂಕಟನರಸಿಂಹಗೌಡ, ಗೋಪಾಲನಾಯಕ ಹರವಿ, ಮಹ್ಮದ್ ಇಸ್ಮಾಯಿಲ್, ಆರ್.ಬಸವರಾಜ ಶೆಟ್ಟಿ, ನಾರಾಯಣರಾವ್ ದೇಸಾಯಿ, ಬುಡ್ಡಪ್ಪ ನಾಯಕ, ಬಸನಗೌಡ, ಚೆನ್ನಪ್ಪಗೌಡ ಹಿರೇಕೊಟ್ನೇಕಲ್, ರಾಮನಗೌಡ ಭೋಗಾವತಿ, ಗುರುರಾಜ ಕುಲಕರ್ಣಿ, ಗುತ್ತಿಗೆದಾರ ಜಾಕೀರ ಮೋಹಿನುದ್ದೀನ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು