ಹಟ್ಟಿ ಚಿನ್ನದ ಗಣಿ: ‘ಏ.30 ರೊಳಗೆ ಆಸ್ತಿ ತೆರಿಗೆ ಪಾವತಿ ಮಾಡಿದರೆ ಶೇ 5ರಷ್ಟು ರಿಯಾಯಿತಿ ನೀಡಲಾಗುವುದು’ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಜಗನ್ನಾಥ ಜೋಶಿ ತಿಳಿಸಿ ದ್ದಾರೆ.

2026-27ನೇ ಸಾಲಿನ ಆಸ್ತಿ ತೆರಿಗೆಯಲ್ಲಿ ರಿಯಾಯಿತಿ ಪಡೆದುಕೊಳ್ಳಲು ಅವಕಾಶವಿದೆ. ಮೇ ಮತ್ತು ಜೂನ್ ತಿಂಗಳಲ್ಲಿ ತೆರಿಗೆ ಪಾವತಿಸಿದರೆ, ರಿಯಾಯಿತಿ ಇರುವುದಿಲ್ಲ. ಆದ್ದರಿಂದ ಆಸ್ತಿ ತೆರಿಗೆ ಪಾವತಿ ಮಾಡಿ ಎಂದು ಹೇಳಿದ್ದಾರೆ.

ಜುಲೈ ತಿಂಗಳಿಂದ ಶೇ 2ರಷ್ಟು ದಂಡ ವಿಧಿಸಲಾಗುತ್ತದೆ. ನೀರಿನ ಕರ ಬಾಕಿ ಉಳಿಸಿಕೊಂಡಿದ್ದರೆ, ಅನಧಿಕೃತ ಜೋಡಣೆ ಕಂಡುಬಂದರೆ, ಸಂಪರ್ಕ ಕಡಿತಗೊಳಿಸಿ, ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಆಸ್ತಿ ಮಾಲೀಕರು ನಿಗದಿತ ಅವಧಿಯಲ್ಲಿ ತೆರಿಗೆ ಪಾವತಿಸಿ, ರಿಯಾಯಿತಿ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-32-1804981936

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.