ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಸೇರುತ್ತಾರೆಂಬುದು ವದಂತಿ: ಕೆ.ವಿರೂಪಾಕ್ಷಪ್ಪ

Last Updated 21 ನವೆಂಬರ್ 2020, 16:15 IST
ಅಕ್ಷರ ಗಾತ್ರ

ಸಿಂಧನೂರು: ‘ತಾವು ಬಿಜೆಪಿ ಸೇರುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳು ಹರಿದಾಡುತ್ತಿವೆ. ಇವುಗಳನ್ನು ಯಾರು ನಂಬಬಾರದು’ ಎಂದು ಮಾಜಿ ಸಂಸದ ಹಾಗೂ ಕುರುಬರ ಎಸ್ಟಿ ಹೋರಾಟ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಕೆ.ವಿರೂಪಾಕ್ಷಪ್ಪ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ವಿಡಿಯೊ ಸಂದೇಶದ ಮೂಲಕ ಅವರು ಮಾತನಾಡಿದ್ದಾರೆ.

ತುಂಗಭದ್ರಾ ಕಾಡಾ ಅಧ್ಯಕ್ಷ ಸ್ಥಾನ ಕೊಡುವುದಾಗಿ ಬಿಜೆಪಿ ನಾಯಕರು ಹೇಳಿರುವುದರಿಂದ ಬಿಜೆಪಿಗೆ ಸೇರುತ್ತಾರೆಂಬ ಸುಳ್ಳು ಸುದ್ದಿಯನ್ನು ಕೆಲವರು ಹಬ್ಬಿಸಿರುವುದು ಸರಿಯಲ್ಲ. ಬಿಜೆಪಿಗೆ ಸೇರುವ ಸುದ್ದಿ ಸತ್ಯಕ್ಕೆ ದೂರವಾದುದ್ದು. ನಾನು ಕುರುಬರ ಎಸ್ಟಿ ಹೋರಾಟ ಸಮಿತಿಯ ಕಾರ್ಯಚಟುವಟಿಕೆಯಲ್ಲಿ ಸಕ್ರಿಯವಾಗಿದ್ದೇನೆ. ವಿನಾಃಕಾರಣ ಈ ರೀತಿ ವದಂತಿಗಳನ್ನು ಹಬ್ಬಿಸಿ ಜನರನ್ನು ಗೊಂದಲಕ್ಕೀಡು ಮಾಡಬಾರದು ಎಂದು ಹೇಳಿದ್ದಾರೆ.

ತಮಗೆ ಈ ಹಿಂದೆ ಕೊರೊನಾ ಸೋಂಕು ತಗುಲಿದ್ದರಿಂದ ಭಾರತೀಯ ಜನತಾ ಪಾರ್ಟಿಯ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಯಾವುದೇ ರಾಜಕೀಯ ವಿಚಾರದ ಕುರಿತು ಚರ್ಚೆ ನಡೆಸಿಲ್ಲ. ಕಾಡಾ ಅಧ್ಯಕ್ಷ ಸ್ಥಾನ ಕೊಡುವುದಾಗಿಯೂ ಆಹ್ವಾನ ನೀಡಿಲ್ಲ. ಇದನ್ನೇ ತಪ್ಪಾಗಿ ಗ್ರಹಿಸಿ ಸುಳ್ಳು ಸುದ್ದಿಗಳನ್ನು ಹಬ್ಬಿಸಬಾರದು ಎಂದು ಕೆ.ವಿರೂಪಾಕ್ಷಪ್ಪ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT