ಮಸ್ಕಿ (ರಾಯಚೂರು): 'ಸಿಡಿ ಲೇಡಿಗೂ ನನಗೂ ಸಂಬಂಧವಿಲ್ಲ. ಆ ಬಗ್ಗೆ ಏನೂ ಪ್ರತಿಕ್ರಿಯೆ ನೀಡುವುದಿಲ್ಲ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಮಸ್ಕಿ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯೊಂದಿಗೆ ನಾಮಪತ್ರ ಸಲ್ಲಿಸಲು ಹೆಲಿಕಾಪ್ಟರ್ ಮೂಲಕ ಮುದಗಲ್‌ಗೆ ಆಗಮಿಸಿದ ವೇಳೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು.ಮತ್ತೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಅದೇ ಹೆಲಿಕಾಪ್ಟರ್ ಮೂಲಕ ಆಗಮಿಸಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

'ಪಕ್ಷದ ಅಧ್ಯಕ್ಷರು ಮಾತನಾಡುತ್ತಾರೆ' ಎಂದು ಹೇಳಿ ನಡೆದರು.

ಮುದಗಲ್‌ನಲ್ಲಿ ಶಾಸಕ ಡಿ.ಎಸ್.ಹುಲಗೇರಿ ಅವರ ಮನೆಯಲ್ಲಿ ನಾಯಕರಿಗೆಲ್ಲ ಮಧ್ಯಾಹ್ನ ಭೋಜನದ ವ್ಯವಸ್ಥೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.