ಶುಕ್ರವಾರ, ಡಿಸೆಂಬರ್ 4, 2020
24 °C

ಅಭಿವೃದ್ಧಿಗೆ ಶ್ರಮಿಸುವೆ: ಲತಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಿರವಾರ: ಪಟ್ಟಣ ಪಂಚಾಯಿತಿಯ ಎಲ್ಲಾ ಸದಸ್ಯರು, ಎಲ್ಲಾ ಹಿರಿಯ ಮುಖಂಡರ ಸಹಕಾರದೊಂದಿಗೆ ಪಟ್ಟಣದ ಅಭಿವೃದ್ದಿಗೆ ಶ್ರಮಿಸುತ್ತೇನೆ' ಎಂದು ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷೆ ಲತಾ ಹೇಳಿದರು.

ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಅಧ್ಯಕ್ಷರ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಅಧಿಕಾರಿದಲ್ಲಿ ಪಕ್ಷಭೇದ ಮಾಡದೇ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಧಿಕಾರಿಗಳ ಸಹಕಾರದೊಂದಿಗೆ ಸಾರ್ವಜನಿಕರ ಸಮಸ್ಯೆಗಳಿಗೆ ಮುಕ್ತಿ ನೀಡಿ ಉತ್ತಮ ಅಧಿಕಾರ ನಡೆಸುತ್ತೇವೆ ಎಂದರು.

ಉಪಾಧ್ಯಕ್ಷ ಚನ್ನಬಸವ ಗಡ್ಲ, ಮುಖ್ಯಾಧಿಕಾರಿ ಕೆ.ಮುನಿಸ್ವಾಮಿ, ಪಟ್ಟಣ ಪಂಚಾಯಿತಿ ಸದಸ್ಯರು, ಮುಖಂಡರಾದ ಜೆ.ಶರಣಪ್ಪಗೌಡ, ಶಿವಾಜಿರಾವ್ ದರ್ಶನಕರ್, ಚುಕ್ಕಿ ಸೂಗಪ್ಪ ಸಾಹುಕಾರ, ಜಿ.ಲೋಕರೆಡ್ಡಿ, ಟಿ.ಆರ್.ಪಾಟೀಲ್, ಪ್ರಭುಗೌಡ ಹೊಸೂರು, ಮಹಿಬೂಬುಸಾಬ್ ದೊಡ್ಡಮನೆ, ಹಸೇನ್ ಅಲಿ, ಎಂ. ನಾಗರಾಜಗೌಡ, ನರಸಿಂಹರಾವ್ ಕುಲಕರ್ಣಿ, ವಿಜಯ ಕುಮಾರ ಗುಡ್ಡದಮನೆ, ರಾಮಶೆಟ್ಟಿ, ರಮೇಶ ಚಿಂಚರಕಿ ಸೇರಿದಂತೆ ಪಟ್ಟಣದ ಮುಖಂಡರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.