ಶನಿವಾರ, ಏಪ್ರಿಲ್ 4, 2020
19 °C

ಪೊಲೀಸರ ಕಾರ್ಯಾಚರಣೆ: 11 ಟಿಪ್ಪರ್‌ ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಜಿಲ್ಲೆಯ ವಿವಿಧೆಡೆ ಅಕ್ರಮ ಮರಳು ಸಾಗಾಣಿಕೆ ದೂರುಗಳನ್ನು ಆಧರಿಸಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ನೇತೃತ್ವದಲ್ಲಿ ಪೊಲೀಸರ ತಂಡವು ಸೋಮವಾರ ರಾತ್ರಿಯಿಂದ ಮಂಗಳವಾರ ಬೆಳಗಿನ ಜಾವದವರೆಗೂ ದಾಳಿ ನಡೆಸಿ 11 ಟಿಪ್ಪರ್‌ಗಳನ್ನು ಜಪ್ತಿ ಮಾಡಿದ್ದಾರೆ.

ಜಾಲಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಎರಡು, ಲಿಂಗಸುಗೂರು ಠಾಣೆ ವ್ಯಾಪ್ತಿಯಲ್ಲಿ ಮೂರು, ದೇವದುರ್ಗ ಠಾಣೆ ವ್ಯಾಪ್ತಿಯಲ್ಲಿ ಐದು ಹಾಗೂ ಪಶ್ಚಿಮ ಠಾಣೆ ವ್ಯಾಪ್ತಿಯಲ್ಲಿ ಒಂದು ಟಿಪ್ಪರ್‌ ವಶಕ್ಕೆ ಪಡೆಯಲಾಗಿದೆ. ಆಯಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಜಪ್ತಿ ಮಾಡಿಕೊಂಡಿರುವ ಟಿಪ್ಪರ್‌ಗಳು ಮತ್ತು ಅಕ್ರಮ ಮರಳಿನ ಅಂದಾಜು ಮೊತ್ತ ₹1.31 ಕೋಟಿ ಎಂದು ತಿಳಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)