ಸೋಮವಾರ, 13 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂಧನೂರು | ಪಡಿತರ ಅಕ್ಕಿ ಅಕ್ರಮ ಸಾಗಣೆ: ವಾಹನ ವಶ

Published 28 ಏಪ್ರಿಲ್ 2024, 15:53 IST
Last Updated 28 ಏಪ್ರಿಲ್ 2024, 15:53 IST
ಅಕ್ಷರ ಗಾತ್ರ

ಸಿಂಧನೂರು: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಬೊಲೆರೊ ಸರಕು ಸಾಗಣೆ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದರೂ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲು ಮೀನಾಮೇಷ ಎಣಿಸುತ್ತಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಅಕ್ರಮವಾಗಿ ಮಾರಾಟ ಮಾಡಲು ಕೊಂಡೊಯ್ಯುತ್ತಿರುವ ಖಚಿತ ಮಾಹಿತಿ ಅರಿತ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಕಟ್ಟಿಮನಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಸ್ಥಳಕ್ಕೆ ಬಂದ ಪೊಲೀಸರು ನಗರದ ಯಲ್ಲಮ್ಮ ದೇವಸ್ಥಾನದ ಬಳಿ ಪಡಿತರ ಅಕ್ಕಿ ಸಾಗಣೆ ಮಾಡುತ್ತಿದ್ದ ವಾಹನವನ್ನು ರಾತ್ರಿ 1 ಗಂಟೆ ಸುಮಾರಿಗೆ ವಶಪಡಿಸಿಕೊಂಡು ಶಹರ ಪೊಲೀಸ್ ಠಾಣೆಗೆ ತಂದಿದ್ದಾರೆ.

ವಾಹನ ಮಾನ್ವಿಯ ಆಲ್ದಾಳ ವೀರಭದ್ರಪ್ಪ ಎನ್ನುವವರಿಗೆ ಸೇರಿದೆ ಎಂದು ವಾಹನ ಚಾಲಕ ಹುಸೇನ್‌ ಸಾಬ್ ಪೊಲೀಸರಿಗೆ ತಿಳಿಸಿದ್ದಾರೆ. ಆದರೆ ಆಹಾರ ಇಲಾಖೆ ಅಧಿಕಾರಿಗಳು ಠಾಣೆಗೆ ಬಂದು ಪಂಚನಾಮೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಪಡಿತರ ಅಕ್ಕಿ ಸಾಗಣೆಯಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ. ಕೂಡಲೇ ಅಕ್ರಮ ಅಕ್ಕಿ ಸಾಗಾಣಿಕೆದಾರ ಹಾಗೂ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಕಟ್ಟಿಮನಿ ಒತ್ತಾಯಿಸಿದ್ದಾರೆ.

ಈ ಕುರಿತು ಶಹರ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಸುಧೀರ್ ಬೆಂಕಿ ಅವರನ್ನು ಸಂಪರ್ಕಿಸಿದಾಗ ‘ಚಾಲಕ ಸಮೇತ ಪಡಿತರ ಅಕ್ಕಿ ಸಾಗಣೆ ಮಾಡುತ್ತಿದ್ದ ವಾಹನವನ್ನು ಠಾಣೆಗೆ ತರಲಾಗಿದೆ. ಆಹಾರ ಇಲಾಖೆ ಅಧಿಕಾರಿಗಳು ಬಂದು ಪಂಚನಾಮೆ ಮಾಡಿ ದೂರು ನೀಡಿದರೆ ಪ್ರಕರಣ ದಾಖಲು ಮಾಡಿಕೊಳ್ಳುವುದಾಗಿ’ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT