ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳು ಶ್ರಮಿಸಿ

ಸಚಿವರಿಂದ ವಿವಿಧ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ
Last Updated 27 ಜೂನ್ 2022, 15:05 IST
ಅಕ್ಷರ ಗಾತ್ರ

ರಾಯಚೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ವತಿಯಿಂದ ಜಾರಿಗೊಳಿಸಲಾದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಶ್ರಮಿಸಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ. ನಾರಾಯಣಸ್ವಾಮಿ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಪ್ರಧಾನ ಮಂತ್ರಿಗಳ ಮಹತ್ವಾಕಾಂಕ್ಷಿ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನದಿಂದ ಬಡವರ ಜೀವನ ಶೈಲಿಯಲ್ಲಿ ಸುಧಾರಣೆಯಾಗಬೇಕು. ಸರ್ಕಾರದ ಮಹತ್ವದ ಯೋಜನೆಗಳಡಿ ಫಲಾನುಭವಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಪಾರದರ್ಶಕತೆ ಕಾಪಾಡಿಕೊಂಡು ಬಡವರು ಮತ್ತು ನಿರ್ಗತಿಕರಿಗೆ ಪ್ರಯೋಜನ ಸಿಗುವಂತೆ ಕಾಳಜಿ ವಹಿಸಬೇಕು ಎಂದು ಹೇಳಿದರು.

ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ, ಒನ್ ನೇಷನ್ ಒನ್ ರೇಷನ್, ಪ್ರಧಾನ ಮಂತ್ರಿ ಮಾತೃ ವಂದನ, ಆವಾಸ್ ಯೋಜನೆ, ಉಜ್ವಲ, ಗರೀಬ್ ಕಲ್ಯಾಣ ಅನ್ನ ಯೋಜನೆ, ಪೋಷಣ ಅಭಿಯಾನ, ಮುದ್ರಾ ಯೋಜನೆ, ಸ್ವಚ್ಛ ಭಾರತ ಮಿಷನ್, ಪ್ರಧಾನಮಂತ್ರಿ ಸ್ವನಿಧಿ ಮತ್ತಿತರ ಯೋಜನೆಗಳ ಪ್ರಗತಿ ಪರಿಶೀಲಿಸಿದರು. ಅಲ್ಲದೆ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನ ಹಾಗೂ ಪ್ರಗತಿಯ ಕುರಿತು ವಿವಿಧ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು.

ಪ್ರಧಾನಮಂತ್ರಿ ಆವಾಸ್ ಯೋಜನೆ, ಉಜ್ವಲ್ ಯೋಜನೆ, ಜಲಜೀವನ ಮಿಷನ್, ಆಯುಷ್ಮಾನ್ ಭಾರತ, ಪ್ರಧಾನಮಂತ್ರಿ ಮುದ್ರಾ ಯೋಜನೆ, ಪೋಷಣ ಅಭಿಯಾನ, ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.

ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕ ಡಾ.ಎಸ್.ಶಿವರಾಜ ಪಾಟೀಲ್, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪಂಚಾಯಿತಿ ಮುಖ್ಯ ನಿರ್ವಾಹಕ ಅಧಿಕಾರಿ ನೂರ್ ಜಹಾರ ಖಾನಂ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪೂರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ ಆರ್., ಲೀಡ್ ಬ್ಯಾಂಕ್ ಮ್ಯಾನೇಜರ್ ಬಾಬು ಬಳಗಾನೂರ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT