ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾನ, ಧರ್ಮದ ಪವಿತ್ರ ಹಬ್ಬ ರಂಜಾನ್

ಜಿಲ್ಲೆಯ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಇಂದು
Last Updated 22 ಏಪ್ರಿಲ್ 2023, 4:55 IST
ಅಕ್ಷರ ಗಾತ್ರ

ರಾಯಚೂರು: ಮುಸ್ಲಿಮರ ಪವಿತ್ರ ಮಾಸ ರಂಜಾನ್ ಶುಕ್ರವಾರ ಮುಗಿದಿದ್ದು ಶನಿವಾರ ಶವ್ವಲ್ ಮೊದಲನೇ ದಿನದಂದು ಈದ್-ಉಲ್- ಫಿತರ್ (ರಂಜಾನ್) ಹಬ್ಬ ಆಚರಿಸಲು ಸಜ್ಜಾಗಿದ್ದಾರೆ.

ಒಂದು ತಿಂಗಳ ಕಾಲ ಮುಸ್ಲಿಮರು ಉಪವಾಸ ವೃತ ಆಚರಿಸಿದ್ದಾರೆ. ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಅನ್ನ, ನೀರು ಬಿಟ್ಟು ಉಪವಾಸ ವ್ರತ ಆಚರಿಸುತ್ತಾರೆ. ಉಪವಾಸ (ರೋಜಾ) ಮಾತ್ರವಲ್ಲದೇ ದಾನ ( ಝಕಾತ್) ನಮಾಜ್, ಕುರಾನ್ ಪಠನ, ತರಾವೀಹ್ ಮಾಡುವ ಮೂಲಕ ದೇವರನ್ನು ( ಅಲ್ಲಾಹ್ ನನ್ನು) ಸ್ಮೃತಿಸಲಾಗುತ್ತದೆ.

ಇಸ್ಲಾಮಿಕ್ ಕ್ಯಾಲೆಂಡರ್ ಪ್ರಕಾರ, ಇದು ಒಂಬತ್ತನೇ ತಿಂಗಳು. ಲೂನಾರ್ ಕ್ಯಾಲೆಂಡರ್ ಅನ್ನು ಇಸ್ಲಾಂ ಧರ್ಮದವರು ಅನುಸರಿಸುತ್ತಾರೆ. ಕಾರಣ, ಅದರಲ್ಲಿ ರಂಜಾನ್ ದಿನಾಂಕ ಬದಲಾಗುತ್ತಿರುತ್ತದೆ. ಈ ಆಚರಣೆಯ ನಂಬಿಕೆಯಂತೆ, ಅಲ್ಲಾನೊಂದಿಗಿನ ತಮ್ಮ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸಲು, ಉಪವಾಸ ಎಂಬುದು ಆತ್ಮಸ್ಥೈರ್ಯ ಹೆಚ್ಚಿಸಲು, ಹಸಿವಿನ ಮಹತ್ವ ಮತ್ತು ಅದೃಷ್ಟ ಸಂಪಾದನೆ ಮಾಡಲು ಶ್ರದ್ಧೆಯಿಂದ ಉಪವಾಸವನ್ನು ಆಚರಿಸುತ್ತಾರೆ.

ತಿಂಗಳ ಪ್ರತಿಯೊಂದು ದಿನ ಮುಸ್ಲಿಮರು, ಈ ಹಬ್ಬದ ಆಚರಣೆ ಮೂಲಕ ಅಲ್ಲಾನಲ್ಲಿ ನಂಬಿಕೆ ಇಟ್ಟುಕೊಳ್ಳುತ್ತಾರೆ. ಪ್ರಾರ್ಥನೆ, ಕುರಾನ್ ಪಠಣ ಮತ್ತು ದಾನ-ಧರ್ಮದಲ್ಲಿ ತೊಡಗುವುದು ಮಾತ್ರವಲ್ಲದೇ ಸ್ನೇಹಿತರು ಮತ್ತು ಕುಟುಂಬದವ ರೊಂದಿಗೆ ತಮ್ಮ ಒಡನಾಟವನ್ನು ಇನ್ನಷ್ಟು ಗಟ್ಟಿಯಾಗಿಸುತ್ತಾರೆ. ಸೂರ್ಯೋದಯದಕ್ಕಿಂತ ಮುಂಚೆ ಕುಟುಂಬ ಸದಸ್ಯರೊಂದಿಗೆ ಸೇವಿಸುವ ಆಹಾರ ವೇಳೆ ( ಸಹಿರಿ) ಹಾಗೂ ಸೂರ್ಯಾಸ್ತದ ವೇಳೆ ಉಪವಾಸ ಮುರಿಯುವ ವೇಳೆ (ಇಫ್ತಾರ್) ಉಪವಾಸದ ಪ್ರಮುಖ ಸಮಯ ಈಫ್ತಿಯಾರ್ ವೇಳೆಯಲ್ಲಿ ಎಲ್ಲರೂ ಒಂದೇ ಕಡೆ ಸೇರಿ ಮಸೀದಿಗಳಲ್ಲಿ, ಕೆಲವರು ಮನೆಗಳಲ್ಲಿ ಸೇರಿ ಖರ್ಜೂರ, ಬಾಳೆ ಹಣ್ಣು, ಕಲ್ಲಂಗಡಿ ಸೇರಿದಂತೆ ಎಲ್ಲಾ ಬಗೆಯ ಹಣ್ಣು– ಹಂಪಲು ತಂದು ಒಂದೆಡೆ ಸೇರಿಸಿ ಸಾಮೂಹಿಕವಾಗಿ ಸೇವಿಸುವ ಮೂಲಕ ಉಪವಾಸ ವ್ರತ ಮುಗಿಸುತ್ತಾರೆ. ಆ ಮೂಲಕ ಬಡವ, ಶ್ರೀಮಂತ ಉನ್ನತ, ಕನಿಷ್ಟ ಎಂಬ ಬೇಧಬಾವ ಮರೆತು ಮಾನವಿಯತೆ ಮೆರೆಯುವ ಮೂಲಕ ಸಂಬಂಧವನ್ನು ಗಟ್ಟಿಗೊಳಿಸಿಕೊಳ್ಳುತ್ತಾರೆ.

ರಂಜಾನಿನ ಕೊನೆಯ ಹತ್ತು ದಿನಗಳಲ್ಲಿ ಪ್ರವಾದಿ ಮೊಹಮ್ಮದ್‌ರನ್ನು ಕುರಾನ್ ಮೂಲಕ ನೆನಪಿಸಿಕೊಳ್ಳುವುದು ಎಂಬ ನಂಬಿಕೆ ಇದೆ.

ಈ ಅವಧಿಯಲ್ಲಿ ಮುಸ್ಲಿಮರು ಮಸೀದಿಯಲ್ಲೇ ತಂಗುವುದು ಅಥವಾ ಮಲಗುತ್ತಾರೆ. ಈ ಮೂಲಕ ಧಾರ್ಮಿಕ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಯತ್ನಿಸುತ್ತಾರೆ.

ಸದ್ಕೆ ಫಿತ್ರ್ : ಮುಸ್ಲಿಮರು ಆಸ್ತಿ ಒಳ್ಳವರು ಸದ್ಖೆ ಫಿತರ್ ಅಂದರೆ ಮುಸ್ಲಿಮರು ಕುಟುಂಬದ ಪ್ರತಿ ಸದಸ್ಯರು ತಲಾ 2 ಕೆಜಿ ಗೋಧಿ ಅಥವಾ ಅಕ್ಕಿ ಇತರೆ ಧಾನ್ಯವನ್ನು ಒಟ್ಟು ಕುಟುಂಬ ಸದಸ್ಯರ ಲೆಕ್ಕದಲ್ಲಿ ತಲಾ 2 ಕೆಜಿ ದಾನ ಮಾಡಬೇಕು. ಇದು ಈದ್ ಉಲ್ ಫಿತರ್ ನಮಾಜ್ ಮಾಡುವ ಮುನ್ನ ಕಡ್ಡಾಯವಾಗಿ ನೀಡಬೇಕು. ಇಸ್ಲಾಂ ನಲ್ಲಿ ಬಡ, ನಿರ್ಗತಿಕರಿಗೆ ಸಹಾಯ ಮಾಡಲು ಕಡ್ಡಾಯವಾಗಿ ಈ ನಿಯಮ ರೂಪಿಸಲಾಗಿದೆ ಎಂದು ಮುಸ್ಲಿಂ ಧರ್ಮಗುರು ಶೇಖ್ ಫಾರೂಕ್ ಮೌಲಾನಾ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT