ರಾಯಚೂರು: ಇಲ್ಲಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿರುವ 'ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಫಲಾನುಭವಿಗಳ ಸಮ್ಮೇಳನ'ವನ್ನು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ನಾರಾಯಣಸ್ವಾಮಿ ಉದ್ಘಾಟಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್, ಸಂಸದ ರಾಜಾ ಅಮರೇಶ್ವರ ನಾಯಕ, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ್ ನಾಯಕ, ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ್ ಕುರೇರ ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದಾರೆ.
ಶಾಸಕ ಡಾ.ಶಿವರಾಜ ಪಾಟೀಲ ಅಧ್ಯಕ್ಷತೆ ವಹಿಸಿದ್ದಾರೆ. ಸಮ್ಮೇಳನದಲ್ಲಿ ಐದು ಸಾವಿರಕ್ಕೂ ಹೆಚ್ಚು ಫಲಾನುಭವಿಗಳು ಪಾಲ್ಗೊಂಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.