ಬುಧವಾರ, ಮಾರ್ಚ್ 29, 2023
29 °C

ಸೌಹಾರ್ದ ಸಹಕಾರಿ ಸಂಸ್ಥೆ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಸ್ಕಿ: ಸಹಕಾರಿ ಸಂಸ್ಥೆಗಳು ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಿ ಬಡ ಕುಟುಂಬಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ವಿರಕ್ತಮಠದ ಅಭಿನವ ಮರಿಸಿದ್ಧಬಸವ ಸ್ವಾಮೀಜಿ ಕರೆ ನೀಡಿದರು.

ತಾಲ್ಲೂಕಿನ ಬಳಗಾನೂರು ಗ್ರಾಮದಲ್ಲಿ ಶುಕ್ರವಾರ ಬಂಧು ಶತಪುರೇಶ ಪತ್ತಿನ ಸೌಹಾರ್ದ ಸಹಕಾರಿ ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಸಹಕಾರಿ ಸಂಸ್ಥೆಯ ಉತ್ತಮ ಆಡಳಿತ ಮಂಡಳಿ ಹಾಗೂ ಪರಿಣತ ಸಿಬ್ಬಂದಿಯಿಂದ ಸಹಕಾರಿ ಸಂಸ್ಥೆ ಆರ್ಥಿಕವಾಗಿ ಬೆಳೆಯಲು ಸಾಧ್ಯ. ಷೇರುದಾರರು ಹಾಗೂ ಗ್ರಾಹಕರ ನಡುವೆ ಉತ್ತಮವಾದ ವ್ಯವಹಾರ ಸಂಬಂಧ ಹೊಂದಬೇಕು‘ ಎಂದು ಹೇಳಿದರು.

ಮುಖಂಡ ರಾಘವೇಂದ್ರರಾವ್ ಮಾತನಾಡಿ, ಸಹಕಾರಿ ಸಂಸ್ಥೆಯ ಯೋಜನೆಗಳ ಬಗ್ಗೆ ವಿವರಿಸಿದರು.

ಇದೇ ವೇಳೆ ನಿವೃತ್ತ ಯೋಧ ಕೆ.ಗುಡದಯ್ಯ ಪೂಜಾರ ಅವರನ್ನು ಸಹಕಾರಿ ಪರವಾಗಿ ಸನ್ಮಾನಿಸಲಾಯಿತು.

ಸಹಕಾರಿ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ಹಾಗೂ ಗ್ರಾಮದ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು