ರಾಯಚೂರು: ‘ಜಿಲ್ಲೆಯಲ್ಲಿ ಪರಿಶಿಷ್ಟರು ವಾಸಿಸುವ ಪ್ರದೇಶಗಳಲ್ಲಿ ಮೂಲಸೌಕರ್ಯ ಹೆಚ್ಚಿಸಬೇಕು’ ಎಂದು ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರ ಅಭಿವೃದ್ಧಿ, ಕಲ್ಯಾಣ, ಏಳಿಗೆಗೆ ವಿವಿಧ ಇಲಾಖೆಗಳು ಹಮ್ಮಿಕೊಂಡಿರುವ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ದೇವದಾಸಿ ಪದ್ಧತಿ ನಿರ್ಮೂಲನೆಗೆ ಜಾಗೃತಿ ಕಾರ್ಯಕ್ರಮಗಳನ್ನು ತೀವ್ರಗೊಳಿಸಬೇಕು. ವಸತಿ ರಹಿತರಿಗೆ ವಸತಿ ಯೋಜನೆಯಡಿ ಮನೆ ನೀಡಬೇಕು. ಮಾಜಿ ದೇವದಾಸಿಯರಿಗೆ ನಿವೇಶನ ಕೊಡಬೇಕು. ಮಾಜಿ ದೇವದಾಸಿಯರನ್ನು ಸಮಾಜ ಬೇರೆ ದೃಷ್ಟಿಯಿಂದಲೇ ನೋಡುತ್ತದೆ. ಹೀಗಾಗಿ ಇವರ ನೆರವಿಗೆ ಅಧಿಕಾರಿಗಳು ಬಂದು ಸಾಮಾಜಿಕ ನ್ಯಾಯ ದೊರಕಿಸುವ ಕೆಲಸ ಮಾಡಬೇಕು’ ಎಂದರು.

‘ಸರ್ಕಾರಿ ಶಾಲಾ-ಕಾಲೇಜಿಗೆ ಬರುವವರಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಹಾಗೂ ಬಡ ಮಕ್ಕಳೇ ಜಾಸ್ತಿ. ಇಂತಹ ಮಕ್ಕಳಿಗೆ ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ಸರ್ಕಾರದ ಅನುದಾನ ಹೊರತಾಗಿ ಸ್ಥಳೀಯವಾಗಿ ಅನುದಾನ ಸಂಗ್ರಹಿಸಿ ಗುಣಮಟ್ಟದ ಶಿಕ್ಷಣ ನೀಡಲು ಮುತುವರ್ಜಿ ವಹಿಸಬೇಕು’ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

‘ಶಾಲೆಗಳಲ್ಲಿ ಮೂಲಸೌಕರ್ಯ ಕೊರತೆ ನೀಗಿಸಬೇಕು. ಅತಿಥಿ ಶಿಕ್ಷಕರನ್ನು ಒದಗಿಸುವ ಮೂಲಕ ಬೋಧಕರ ಕೊರತೆ ನೀಗಿಸಬೇಕು. ತಳ ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯದಿದ್ದಲ್ಲಿ ಮುಂದೆ ಅದು ದೊಡ್ಡ ಸಾಮಾಜಿಕ ಪಿಡುಗಾಗಿ ಪರಿಣಮಿಸಬಹುದು. ನಿರುದ್ಯೋಗದಂಥ ಸಮಸ್ಯೆ ತಲೆದೋರಬಹುದು. ಹೀಗಾಗಿ ಸರ್ಕಾರಿ-ಖಾಸಗಿ ಮಕ್ಕಳ ನಡುವೆ ಇರುವ ಅಂತರ ನಿವಾರಿಸಬೇಕು’ ಎಂದು ಹೇಳಿದರು.

‘ಲೋಕೋಪಯೋಗಿ, ನೀರಾವರಿ, ಜೆಸ್ಕಾಂ, ಪಿ.ಆರ್.ಇ.ಡಿ, ಸ್ಥಳೀಯ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ಕೈಗೊಳ್ಳುವ ಸಿವಿಲ್, ಮೂಲಸೌಕರ್ಯ ಕಾಮಗಾರಿಗಳ ಪೈಕಿ ₹1 ಕೋಟಿ ವರೆಗಿನ ಕಾಮಗಾರಿಗಳಿಗೆ ಅನುಸೂಚಿತ ಜಾತಿ ಗುತ್ತಿಗೆದಾರರಿಗೆ ಶೇ 17.5 ಮತ್ತು ಅನುಸೂಚಿತ ಪಂಗಡಗಳ ವರ್ಗದ ಗುತ್ತಿಗೆದಾರರಿಗೆ ಶೇ 7.5ರಂತೆ ಮೀಸಲಾತಿ ಅನ್ವಯ ಗುತ್ತಿಗೆ ನೀಡಲು ಸರ್ಕಾರದ ಸ್ಪಷ್ಟ ನಿರ್ದೇಶನವಿದೆ. ಇದರ ಅನ್ವಯ ವಿವಿಧ ಕಾಮಗಾರಿಗಳಲ್ಲಿ ಈ ವರ್ಗದ ಗುತ್ತಿಗೆದಾರರಿಗೆ ಅವಕಾಶ ಮಾಡಿಕೊಡಬೇಕು’ ಎಂದರು.

‘ಪರಿಶಿಷ್ಟರು ವಾಸಿಸುವ ಪ್ರದೇಶಗಳಲ್ಲಿ ಕಾಮಗಾರಿ ಕೈಗೊಂಡು ಶೇಕಡ 100ರಷ್ಟು ಪ್ರಗತಿ ಸಾಧಿಸಬೇಕು. ಜೆ.ಜೆ.ಎಂ ಅಡಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಆ ಜನಾಂಗದ ಬೇಡಿಕೆಗೆ ಅನುಗುಣವಾಗಿ ಸ್ಮಶಾನ ಭೂಮಿ ಮಂಜೂರು ಮಾಡಬೇಕು’ ಎಂದು ಸೂಚನೆ ನೀಡಿದರು.

ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಸದಸ್ಯರಾದ ದುರ್ಯೋಧನ ಐಹೊಳೆ, ಬಸನಗೌಡ ದದ್ದಲ, ಬಸವರಾಜ ಮತ್ತಿಮಡು, ಕರೆಮ್ಮ ನಾಯಕ, ಶಾಂತರಾಮ ಬುಡ್ನ ಸಿದ್ದಿ, ಜಗದೇವ ಗುತ್ತೇದಾರ, ಅಧೀನ ಕಾರ್ಯದರ್ಶಿ ಪಿ.ಸೀನ, ಜಿಲ್ಲಾಧಿಕಾರಿ ನಿತೀಶ ಕೆ., ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಶಿಕಾಂತ ಶಿವಪೂರೆ ಹಾಜರಿದ್ದರು.

ಹೆಚ್ಚಿನ ಸಾಲ ಸೌಲಭ್ಯ ಒದಗಿಸಿ’ ‘

ರಾಯಚೂರು ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ 400933 ಹಾಗೂ ಪರಿಶಿಷ್ಟ ಪಂಗಡದ 367071 ಜನಸಂಖ್ಯೆ ಇದೆ. ಶೇ 20.79 ಪರಿಶಿಷ್ಟ ಜಾತಿ ಸಮುದಾಯದವರು ಹಾಗೂ ಶೇ 19.03ರಷ್ಟು ಪರಿಶಿಷ್ಟ ಪಂಗಡದವರು ಇದ್ದಾರೆ. ಜಿಲ್ಲೆಯಲ್ಲಿ ಅನುಸೂಚಿತ ಪಂಗಡಗಳ ಅನುದಾನವನ್ನು ನಿಗದಿತ ಅವಧಿಯಲ್ಲಿ ಅರ್ಹ ಫಲಾನುಭವಿಗಳಿಗೆ ಮುಟ್ಟಿಸಬೇಕು. ನರೇಗಾ ಯೋಜನೆಯಡಿ ಹೆಚ್ಚಿನ ಸೌಲಭ್ಯ ಒದಗಿಸಬೇಕು. ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿವೃದ್ಧಿಯಡಿ ಸಮುದಾಯ ಬಂಡವಾಳ ನಿಧಿ ಅನುದಾನದಲ್ಲಿ ಹೆಚ್ಚಿನ ಸಾಲ ಸೌಲಭ್ಯ ಒದಗಿಸಬೇಕು’ ಎಂದು ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.