ಮಂಗಳವಾರ, ನವೆಂಬರ್ 24, 2020
20 °C
ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಒತ್ತಾಯ

‘ಖಾತ್ರಿ’ ಕೆಲಸದ ಅವಧಿ ಹೆಚ್ಚಿಸಿ: ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು:  ಉದ್ಯೋಗ ಖಾತ್ರಿ  ಯೋಜನೆ ಅಡಿಯಲ್ಲಿ ಕೂಲಿ ಕೆಲಸದ ಅವಧಿಯನ್ನು 200 ದಿನಗಳಿಗೆ ಹೆಚ್ಚಿಸಬೇಕು. ಪಡಿತರ ಧಾನ್ಯಗಳ ವಿತರಣೆಯಲ್ಲಿ ತಲಾ 5 ಕೆಜಿ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೂಸ್) ನೇತೃತ್ವದಲ್ಲಿ ಕೂಲಿಕಾರರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಮಾನವ ಸರಪಳಿ ನಡೆಸಿ ಪ್ರತಿಭಟನೆ ನಡೆಸಿದರು.

ಆನಂತರ ಈ ಕುರಿತು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿ, ಲಾಕ್‍ಡೌನ್ ಮತ್ತು ಕೋವಿಡ್ ಹಿನ್ನೆಲೆಯಲ್ಲಿ
ಲಕ್ಷಾಂತರ ವಲಸೆ ಕಾರ್ಮಿಕರು ಕೆಲಸವಿಲ್ಲದೇ ತಮ್ಮ ಗ್ರಾಮಗಳಿಗೆ ಮರಳಿ ಬಂದಿದ್ದಾರೆ. ಆದರೆ ಸಾವಿರಾರು ಕುಟುಂಬಗಳು ಈಗಾಗಲೇ 100 ದಿನಗಳನ್ನು ಪೂರ್ಣಗೊಳಿಸಿದ್ದಾರೆ. ಮರುವಲಸೆ ಬಂದ ಕುಟುಂಬದ ಸದಸ್ಯರಿಗೆ ಸೇರಿದಂತೆ ಈಗ ಯಾವುದೇ ಉದ್ಯೋಗವಿಲ್ಲದೇ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ದೂರಿದರು.

ಆಹಾರ ಧಾನ್ಯಗಳ ಕೊರತೆಯಿಂದ ತೀವ್ರ ಸಂಕಷ್ಟದಲ್ಲಿದ್ದಾರೆ. ಪ್ರವಾಹದಿಂದಲೂ ಜನರು ತೊಂದರೆಗೆ ಸಿಲುಕಿದ್ದಾರೆ. ಕೂಡಲೇ ಉದ್ಯೋಗ ಖಾತ್ರಿ ಯೋಜನೆಯಡಿ 200 ಮಾನವ ದಿನಗಳಿಗೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಲಕ್ಷಾಂತರ ಕುಟುಂಬಗಳು ಬದುಕು ಕಟ್ಟಿಕೊಳ್ಳುವುದಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಅಭಯ, ಬಸವರಾಜ,ಗೋವಿಂದು, ಇಮಾನುವೇಲ್, ಪ್ರಶಾಂತ ಹಾಗೂ ಇತರರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು