ಯುವತಿಯೊಂದಿಗೆ ಅಸಭ್ಯ ವರ್ತನೆ– ದೂರು

7

ಯುವತಿಯೊಂದಿಗೆ ಅಸಭ್ಯ ವರ್ತನೆ– ದೂರು

Published:
Updated:

ಲಿಂಗಸುಗೂರು: ಧರ್ಮಸ್ಥಳದಿಂದ ಲಿಂಗಸುಗೂರಿಗೆ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ನಿರ್ವಾಹಕ ಅಸಭ್ಯವಾಗಿ ವರ್ತಿಸಿದ ಘಟನೆ ಶನಿವಾರ ರಾತ್ರಿ ಜರುಗಿದೆ.

ಲಿಂಗಸುಗೂರು ಘಟಕದ ಬಸ್‌ನಲ್ಲಿ ಪ್ರಯಾಣ ಆರಂಭಿಸಿದಾಗಿಂದ ಯುವತಿ ಹಲವು ಬಾರಿ ಎಚ್ಚರಿಕೆ ನೀಡಿದರೂ, ನಿರ್ವಾಹನಿಕಗೆ ಸುಮ್ಮನಾಗಿಲ್ಲ. ಆದ್ದರಿಂದ ಶಿವಮೊಗ್ಗ ಬಸ್ ನಿಲ್ದಾಣದಲ್ಲಿಯೇ ದೂರು ಸಲ್ಲಿಸಿರುವೆ ಎಂದು ಯುವತಿ ತಿಳಿಸಿದ್ದಾಳೆ.

ಸಾರಿಗೆ ಘಟಕ ಅಧಿಕಾರಿಗೆ ಭಾನುವಾರ ದೂರು ಸಲ್ಲಿಸಿದ ಯುವತಿ ಇಂತಹ ಘಟನೆಗಳು ಜರುಗದಂತೆ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ನಿರ್ವಾಹಕ ದುರುಗಪ್ಪ ಗುಡಿಜಾವೂರು ವಿರುದ್ಧ ಹಿರಿಯ ಅಧಿಕಾರಿಗೆ ವರದಿ ಸಲ್ಲಿಸಲಾಗಿದೆ ಎಂದು ಘಟಕದ ವ್ಯವಸ್ಥಾಪಕ ಪ್ರಕಾಶ ದೊಡ್ಡಮನಿ ಸ್ಪಷ್ಟಪಡಿಸಿದ್ದಾರೆ.

ಬೆಳ್ಳಿ ಆಭರಣ ಕಳ್ಳತನ

ಯರಗೇರಾ ಗ್ರಾಮದ ಮಾನರೆಡ್ಡಿ ಜ್ಯುವೆಲರಿ ಅಂಗಡಿಯಲ್ಲಿ ₹6 ಸಾವಿರ ಮೌಲ್ಯದ 150 ಗ್ರಾಂ ಬೆಳ್ಳಿಯ ಆಭರಣಗಳು ಶನಿವಾರ ರಾತ್ರಿ ಕಳ್ಳತನವಾಗಿದ್ದು, ಯರಗೇರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !