ಗುರುವಾರ , ಸೆಪ್ಟೆಂಬರ್ 23, 2021
20 °C

ಸರಳವಾಗಿ ಸ್ವಾತಂತ್ರ್ಯ ದಿನ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜಾಲಹಳ್ಳಿ: 75ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಭಾನುವಾರ ವಿವಿಧೆಡೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು.

ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಮುಖ್ಯಾಧಿಕಾರಿ ಸಾಬಣ್ಣ ಕಟ್ಟಿಕಾರ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ,‘ಮಹಾತ್ಮರ ತ್ಯಾಗ, ಬಲಿದಾನದ ಬಳಿಕ ಸಿಕ್ಕ ಈ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಹೋಗುವ ಅವಶ್ಯಕತೆ ಇದೆ. ಈಗಿನ ಯುವಕರು ಇತಿಹಾಸವನ್ನು ಓದಿಕೊಳ್ಳಬೇಕು’ ಎಂದು ತಿಳಿಸಿದರು.

ಉಪ ತಹಶೀಲ್ದಾರ್ ಕಚೇರಿ, ಬ್ಯಾಂಕ್, ಸಹಕಾರ ಸಂಘ, ಶಾಲಾ–ಕಾಲೇಜು ಸೇರಿದಂತೆ ವಿವಿಧೆಡೆ ಧ್ವಜಾರೋಹಣ ಮಾಡಿದರು.

ಪಟ್ಟಣ ಪಂಚಾಯಿತಿ ಸಿಬ್ಬಂದಿ ಯಂಕೋಬ ಪಲಕನಮರಡಿ ಹಾಗೂ ವಿಠೋಬ ಮಾಳಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು