ರಾಯಚೂರು: ‘ಭಾರತ ಇಂದು ಆರ್ಥಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಬಿಕ್ಕಟ್ಟಿನಲ್ಲಿದೆ’ ಎಂದು ಎಐಡಿವೈಓ ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವ ಜಾನೇಕಲ್ ಹೇಳಿದರು.

ಎಐಡಿಎಸ್ಒ, ಎಐಡಿವೈಓ, ಎಐಎಂಎಸ್ಎಸ್ ಸಂಘಟನೆಗಳ ವತಿಯಿಂದ ನಗರದ ಭಗತ್ ಸಿಂಗ್ ವೃತ್ತದಲ್ಲಿ ಸೋಮವಾರ ದೇಶದ ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಕ್ರಾಂತಿಕಾರಿಗಳಾದ ಭಗತ್ ಸಿಂಗ್, ಸುಖದೇವ್ ಹಾಗೂ ರಾಜಗುರು ಅವರ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

’ಒಂದು ಕಡೆ ಶಿಕ್ಷಣ ಸಂಪೂರ್ಣವಾಗಿ ಖಾಸಗಿಕರಣವಾಗುತ್ತಿದ್ದು, ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ 40,000 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮುಚ್ಚಲು ಹೊರಟಿದೆ. ರೈತರ ಬೆಳೆಗೆ ಯೋಗ್ಯ ಬೆಲೆ ಇಲ್ಲದೆ ಲಕ್ಷಾಂತರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಎಲ್ಲ ಸಮಸ್ಯೆಗಳ ವಿರುದ್ಧ ದೇಶದ ವಿದ್ಯಾರ್ಥಿ ಯುವಜನ ಮಹಿಳೆಯರು ಒಗ್ಗಟ್ಟಿನಿಂದ ಭಗತ್ ಸಿಂಗ್ ಕಂಡ ಶೋಷಣೆ ರಹಿತ ಸಮಸಮಾಜ ನಿರ್ಮಾಣ ಮಾಡುವುದು ನಮ್ಮೆಲ್ಲರ ಮೇಲೆ ಜವಾಬ್ದಾರಿಯಾಗಿದೆ’ ಎಂದರು.

‘ಭಗತ್ ಸಿಂಗ್ ಅವರು ಯಾವತ್ತೂ ಜೀವನದಲ್ಲಿ ರಾಜಿ ಮಾಡಿಕೊಳ್ಳಲಿಲ್ಲ. ನಂಬಿದ ತತ್ವಕ್ಕಾಗಿ ಜೀವವನ್ನೇ ಕೊಟ್ಟರು. ಬ್ರಿಟಿಷರ ವಿರುದ್ಧ ರಾಜಿ ಮಾಡಿಕೊಳ್ಳದೆ ನಗುನಗುತ್ತ ಗಲ್ಲಿಗೇರಿದರು. ಬ್ರಿಟಿಷರನ್ನು ಭಾರತದಿಂದ ಓಡಿಸುವುದು ಮಾತ್ರ ಅವರ ಗುರಿಯಾಗಿರಲಿಲ್ಲ. ಭಾರತದಲ್ಲಿ ಸಮಾಜವಾದಿ ಕ್ರಾಂತಿ ಮಾಡಬೇಕು ಎನ್ನುವ ಪಣತೊಟ್ಟಿದ್ದರು. ಅದಕ್ಕಾಗಿ ತಮ್ಮ ಜೀವನ ಬಲಿದಾನ ಮಾಡಿದರು’ ಎಂದರು.

ಕೃಷಿ ವಿವಿ ಸಂಶೋಧನಾ ವಿದ್ಯಾರ್ಥಿ ಹಾಗೂ ಎಐಡಿವೈಓ ಸದಸ್ಯ ಶಿವಪ್ಪ ಅಸ್ಕಿಹಾಳ್ ಮಾತನಾಡಿ, ‘ಭಗತ್ ಸಿಂಗ್ ಅವರು ಪುಸ್ತಕ ಪ್ರೇಮಿಯಾಗಿದ್ದರು. ಅತಿ ಕಡಿಮೆ ವಯಸ್ಸಿನಲ್ಲಿ ಬಹಳಷ್ಟು ಪುಸ್ತಕವನ್ನು ಓದಿದ್ದರು. ಭಾರತದಲ್ಲಿ ಕ್ರಾಂತಿಯಾಗಬೇಕೆಂದರೆ ಗನ್ನಿನ ಜೊತೆ ಪೆನ್ನಿನ ಅವಶ್ಯಕತೆ ಇದೆ ಎಂದು ಅರಿತಿದ್ದರು. ಭಗತ್ ಸಿಂಗ್ ಮೇಲೆ ಜಲಿಯನ್ ವಾಲಾಬಾಗ್ ಘಟನೆ ಅತ್ಯಂತ ಗಾಢವಾದ ಪರಿಣಾಮವನ್ನು ಬೀರಿತ್ತು. ಹಾಗಾಗಿ ಅತ್ಯಂತ ಚಿಕ್ಕ ವಯಸ್ಸಿನಲ್ಲಿ ಬ್ರಿಟಿಷರ ದಬ್ಬಾಳಿಕೆ ವಿರುದ್ಧ ಹೋರಾಡುವ ಸಂಕಲ್ಪನವರು ತೊಟ್ಟಿದ್ದರು’ ಎಂದು ತಿಳಿಸಿದರು.

‘ಭಗತ್ ಸಿಂಗ್ ಅವರ ನೇತೃತ್ವದ ಕ್ರಾಂತಿಕಾರಿಗಳ ಗುಂಪು ಜಾತಿ ಪದ್ಧತಿ, ಕೋಮುವಾದದಂತ ಸಾಮಾಜಿಕ ಪಿಡುಗುಗಳ ವಿರುದ್ಧ ರಾಜಿರಹಿತವಾಗಿ ಹೋರಾಟ ನಡೆಸಿದರು’ ಎಂದು ಹೇಳಿದರು.

ಸಾಹಿತಿ ಬಶೀರ್ ಅಹ್ಮದ್ ಹೊಸಮನಿ, ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಮಹೇಶ ಚಿಕ್ಕಲಪರವಿ, ಎಐಎಂಎಸ್ಎಸ್ ಜಿಲ್ಲಾ ಸಂಘಟನಾಕಾರ ಸರೋಜ ಗೊನವಾರ ಅವರು ಕ್ರಾಂತಿಕಾರಿಗಳ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಬಸವರಾಜ್ ಅಧ್ಯಕ್ಷತೆ ವಹಿಸಿದ್ದರು, ಎಐಡಿವೈಓ ಜಿಲ್ಲಾ ಕಾರ್ಯದರ್ಶಿ ವಿನೋದಕುಮಾರ ಹಾಗೂ ಕಾರ್ಮಿಕ ಮುಖಂಡರಾದ ಮಹೇಶ ಚಿಕಲಪರ್ವಿ ಮತ್ತು ನಂದ ಗೋಪಾಲ, ಅಂಬಿಕಾ, ಮೌನೇಶ್, ಶಿವು ಕುಮಾರ, ಬಸವರಾಜ್ ದೇಸಾಯಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.