ರಾಯಚೂರು: ‘ಇಂದಿನ ಯುವಜನರಲ್ಲಿ ದೇಶಭಕ್ತಿ, ದೇಶಪ್ರೇಮ ಹಾಗೂ ಭಾವೈಕ್ಯತೆಯನ್ನು ಮೂಡಿಸಲು ಭಾರತ ಸೇವಾದಳ ಉದ್ದೇಶಗಳು ಸಹಕಾರಿಯಾಗಲಿವೆ’ ಎಂದು ಬಾಲಕರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ರವೀಂದ್ರ ಬಂಡಿ ಅಭಿಪ್ರಾಯಪಟ್ಟರು.

ಇಲ್ಲಿಯ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಭಾರತ ಸೇವಾದಳ ಜಿಲ್ಲಾ ಸಮಿತಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಉಪನ್ಯಾಸಕರಿಗೆ ಆಯೋಜಿಸಿದ್ದ ಭಾರತ ಸೇವಾದಳ ಮಾಹಿತಿ ಹಾಗೂ ಶಾಖಾ ನವೀಕರಣ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಯುವಜನರು ಯಾವುದೇ ದುಶ್ಚಟಗಳಿಗೆ ಮಾರುಹೋಗಬಾರದು. ಸದೃಢ ಆರೋಗ್ಯ ಕಾಯ್ದುಕೊಳ್ಳುವ ಜತೆಗೆ ಓದಿಗೆ ಹೆಚ್ಚು ಒತ್ತುಕೊಡಬೇಕು. ದೇಶ ಪ್ರೇಮವನ್ನು ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಮುಖ್ಯ ಅತಿಥಿ ಭಾರತ ಸೇವಾದಳ ಜಿಲ್ಲಾ ಘಟಕದ ಉಪಾಧ್ಯಕ್ಷ ಜಿ.ಎಸ್. ಹಿರೇಮಠ ಮಾತನಾಡಿ, ‘ಪ್ರತಿಯೊಬ್ಬ ಭಾರತೀಯ ರಾಷ್ಟ್ರಧ್ವಜದ ಬಗ್ಗೆ ಅರಿವು ಹೊಂದಬೇಕು. ನಾವೆಲ್ಲರೂ ಒಂದೇ ಎನ್ನುವ ಮನೋಭಾವನೆ ಬೆಳೆಸಿಕೊಳ್ಳಬೇಕು’ ಎಂದರು.

‘ಉಪನ್ಯಾಸಕರು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಭಾರತ ಸೇವಾದಳ ಘಟಕದ ಮುಖಾಂತರ ಸೇವಾ ಮನೋಭಾವನೆ ಮೂಡಿಸಲು ಉಪನ್ಯಾಸಕರು ಪ್ರೇರೇಪಿಸಬೇಕು’ ಎಂದು ಮನವಿ ಮಾಡಿದರು.

‘ಮಹಾತ್ಮ ಗಾಂಧೀಜಿ ಅವರ ತತ್ವ ಮತ್ತು ಸಿದ್ಧಾಂತದ ಅಡಿಯಲ್ಲಿ ನಮ್ಮ ದೇಶ ಸಾಗುತ್ತಿದೆ. ಆದ್ದರಿಂದ ಯುವಜನರು ಕೂಡ ಅದೇ ಮಾರ್ಗದಲ್ಲಿ ನಡೆಯಬೇಕು’ ಎಂದು ಉಪನ್ಯಾಸಕ ಗೋವರ್ಧನ ರೆಡ್ಡಿ ಹೇಳಿದರು.

ಉಪನ್ಯಾಸಕ ವೆಂಕನಗೌಡ ಮಾತನಾಡಿ, ‘ನಮ್ಮ ಕಾಲೇಜಿನಲ್ಲಿ ಭಾರತ ಸೇವಾದಳ ಘಟಕವನ್ನು ನವೀಕರಿಸಿಕೊಂಡು ಬರುವ ದಿನಗಳಲ್ಲಿ ಹೆಚ್ಚಿನ ಚಟುವಟಿಕೆಗಳಲ್ಲಿ ಭಾಗವಹಿಸೋಣ’ ಎಂದು ತಿಳಿಸಿದರು.

ರಾಯಚೂರು ಜಿಲ್ಲಾ ಸಹಕಾರ ಒಕ್ಕೂಟದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಾಯತ್ರಿ ಮಾತನಾಡಿ, ‘ಯುವ ಜನರು ಸಹಕಾರ ಕ್ಷೇತ್ರದಲ್ಲಿ ಹೆಚ್ಚಿನ ರೀತಿಯಲ್ಲಿ ಭಾಗವಹಿಸಲು ಪದವಿ ಪೂರ್ವ ಕಾಲೇಜಿನಲ್ಲಿ ಚರ್ಚಾ ಸ್ಪರ್ಧೆ ಹಮ್ಮಿಕೊಳ್ಳುತ್ತಿದ್ದು, ಉಪನ್ಯಾಸಕರು ತಮ್ಮ ಕಾಲೇಜಿನ ವಿದ್ಯಾರ್ಥಿಗಳಿಗೆ ಸಹಕಾರ ಕ್ಷೇತ್ರದ ಬಗ್ಗೆ ತಿಳಿಸಿ ಭಾಗವಹಿಸಲು ಪ್ರೇರೇಪಿಸಬೇಕು’ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಭಾರತ ಸೇವಾದಳ ತಾಲ್ಲೂಕು ಘಟಕದ ಅಧ್ಯಕ್ಷ ವಿರೂಪಾಕ್ಷಪ್ಪ ಗೌಡ ಕ್ಯಾದಿಗೇರಿ ಮಾತನಾಡಿ, ‘ಇಂದಿನ ಯುವಜನರಲ್ಲಿ ಶಾರೀರಿಕ ಚಟುವಟಿಕೆಗಳು ಕಡಿಮೆಯಾಗುತ್ತಿದೆ. ವಿದ್ಯಾರ್ಥಿಗಳು ಕ್ರೀಡೆ ಎನ್ಸಿಸಿ, ಎನ್ಎಸ್ಎಸ್, ಭಾರತ ಸೇವಾದಳ ಘಟಕಗಳಲ್ಲಿ ಭಾಗವಹಿಸಿ ಶಾರೀರಿಕ ಚಟುವಟಿಕೆ, ವ್ಯಾಯಾಮ ಮಾಡಬೇಕು’ ಎಂದು ಹೇಳಿದರು.

ವಿವಿಧ ಕಾಲೇಜುಗಳ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು. ಜಿಲ್ಲಾ ಸಂಘಟಕ ಚಂದ್ರಶೇಖರ ಜಮಾದಾರ ಸ್ವಾಗತಿಸಿದರು. ವಿದ್ಯಾಸಾಗರ ಚಿಣಮಗೇರಿ ನಿರೂಪಿಸಿದರು. ಯಾದಗಿರಿ ಜಿಲ್ಲಾ ಸಂಘಟಕ ಸೈಯದ್ ಕಮರುದ್ದೀನ್ ವಂದಿಸಿದರು.

ಹಿಂದೂಸ್ಥಾನ ಸೇವಾದಳದ ಹೆಸರಿನೊಂದಿಗೆ 1923ರಲ್ಲಿ ಆರಂಭವಾದ ಸಂಸ್ಥೆಯು 1950ರ ಮಾರ್ಚ್ 16ರಂದು ಭಾರತ ಸೇವಾದಳವಾಗಿ ಪುನರ್ ನಾಮಕರಣಗೊಂಡಿದೆ.
ಜಿ.ಎಸ್. ಹಿರೇಮಠ ಭಾರತ ಸೇವಾದಳ ಜಿಲ್ಲಾ ಘಟಕದ ಉಪಾಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.