ರಾಯಚೂರು: ದೇವದುರ್ಗದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿವಿಧ ವೃತ್ತಿಗಳಲ್ಲಿ ಮೆರಿಟ್ ಹಾಗೂ ಮೀಸಲಾತಿ ಆಧಾರದ ಮೇಲೆ ನೇರ ಪ್ರವೇಶಕ್ಕಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಹ ಆಸಕ್ತ ಎಸ್ಸೆಸ್ಸೆಲ್ಸಿ ಪಾಸ್, ಫೇಲ್ ಆದ ಅಭ್ಯರ್ಥಿಗಳು ನೇರ ಪ್ರವೇಶಕ್ಕೆ ಆಫ್ ಲೈನ್ ಪಡೆದು ಅರ್ಜಿಯನ್ನು ಪಡೆದು ಆಗಸ್ಟ್ 31 ರೊಳಗೆ ಸಲ್ಲಿಸಲು ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಪ್ರವೇಶ ಹಾಗೂ ಬೋಧನಾ ಶುಲ್ಕ ₹1200 ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9740671796, ತರಬೇತಿ ಅಧಿಕಾರಿಗಳ ಮೊಬೈಲ್ ಸಂಖ್ಯೆ 7676126770ಗೆ ಸಂಪರ್ಕಿಸಬಹುದು ಎಂದು ಪ್ರಾಚಾರ್ಯರು ತಿಳಿಸಿದ್ದಾರೆ.
27 ರಂದು ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ
ರಾಯಚೂರು: ಭವಿಷ್ಯನಿಧಿ, ಪಿಂಚಣಿ ಸಂಬಂಧಿತ ಕುಂದು ಕೊರತೆ ನಿವಾರಣೆಗಾಗಿ ಜುಲೈ 27ರಂದು ಬೆಳಿಗ್ಗೆ 9.30ರಿಂದ ಸಂಜೆ 4ರ ವರೆಗೆ ನಗರದ ಕನ್ನಡ ಭವನದಲ್ಲಿ ‘ನಿಧಿ ಆಪ್ಕೆ ನಿಕಟ್’ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ ಪ್ರಾದೇಶಿಕ ಕಚೇರಿಯ ಆಯುಕ್ತರು ತಿಳಿಸಿದ್ದಾರೆ.
ಜಿಲ್ಲೆಯ ಉದ್ಯೋಗದಾತರು, ನೌಕರರು ಮತ್ತು ಪಿಂಚಣಿದಾರರು, ಇಪಿಎಫ್ ಚಂದಾದಾರರು ಮತ್ತು ಉದ್ಯೋಗದಾತರು ಈ ಕಾರ್ಯಕ್ರಮಕ್ಕೆ ಹಾಜರಾಗಿ ಇದರ ಪ್ರಯೋಜನ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ sro.raichur@epfindia.gov.in ನಲ್ಲಿ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ನಗರಸಭೆ ಪ್ರಭಾರ ಪೌರಾಯುಕ್ತರಾಗಿ ಮೆಹಬೂಬ ಜಿಲಾನಿ
ರಾಯಚೂರು ನಗರಸಭೆ ಪ್ರಭಾರ ಪೌರಾಯುಕ್ತರಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಮೆಹಬೂಬ ಜಿಲಾನಿ ಅವರನ್ನು ಜಿಲ್ಲಾಧಿಕಾರಿ ನಿಯೋಜಿಸಿದ್ದಾರೆ.
ನಿರುದ್ಯೋಗಿ ಅಭ್ಯರ್ಥಿಗಳಿಗೆ ಪೂರ್ವಭಾವಿ ತರಬೇತಿ
ರಾಯಚೂರು ಜಿಲ್ಲೆಯಲ್ಲಿ ನಿರುದ್ಯೋಗಿ ಅಭ್ಯರ್ಥಿಗಳು ಕೆಇಎ ಇಂದ ಅಧಿಸೂಚಿಸಲ್ಪಟ್ಟ ಗ್ರೂಪ್-ಬಿ ಮತ್ತು ಗ್ರೂಪ್-ಸಿ ಹುದ್ದೆಗಳಿಗೆ ಜುನ್ 24 ರಿಂದ ಆಗಸ್ಟ್ 8ರವರೆಗೆ 13 ದಿನಗಳ ಪೂರ್ವ ಭಾವಿ ಆಯ್ಕೆಯ ಪೂರ್ವ ತರಬೇತಿಯನ್ನು ಆಯೋಜಿಸಲಾಗಿದೆ.
ನುರಿತ ಉಪನ್ಯಾಸಕರಿಂದ ಸಾಮಾನ್ಯ ಜ್ಞಾನ, ಕನ್ನಡ, ಇಂಗ್ಲಿಷ್, ಗಣಿತ, ಕಂಟ್ಯೂಟರ್ ವಿಷಯ ಕುರಿತು ಉಪನ್ಯಾಸ ತರಬೇತಿ ನಗರದ ಗೂಡ್ಸ್‌ಶೆಡ್ ರಸ್ತೆಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಆವರಣದಲ್ಲಿ ಏರ್ಪಡಿಸಲಾಗುತ್ತದೆ. ಸಮಯ ಮಧ್ಯಹ್ನ 2 ರಿಂದ ಸಂಜೆ 6 ವರೆಗೆ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಈ ತರಬೇತಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08532-231684, 9901028565, 0873610442, 8678603928 ಗೆ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.