ಮುದಗಲ್: ‘ರಾಜ್ಯ ಕಾಂಗ್ರೆಸ್ ಸರ್ಕಾರ ಕಲ್ಯಾಣ ಕರ್ನಾಟಕ ಭಾಗಕ್ಕೆ ಅನ್ಯಾಯ ಮಾಡುತ್ತಿದೆ’ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಒಳ ಮೀಸಲಾತಿ ನೆಪದಲ್ಲಿ ಈ ಭಾಗದ 20 ಸಾವಿರ ಶಿಕ್ಷಕರ ನೇಮಕಾತಿ ಮಾಡುತ್ತಿಲ್ಲ. ಶಿಕ್ಷಕರ ಕೊರತೆಯಿಂದಾಗಿ ಇಲ್ಲಿನ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದಿದ್ದಾರೆ. ಶಿಕ್ಷಕರ ನೇಮಕಾತಿ ಮಾಡಿ ಎಂದು ಅಧಿವೇಶನದಲ್ಲಿ ಅನೇಕ ಬಾರಿ ಒತ್ತಾಯಿಸಿದರೂ ಪ್ರಯೋಜನ ವಾಗಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

‘ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಶೈಕ್ಷಣಿಕ ಅಭಿವೃದ್ಧಿಗಾಗಿ ಪ್ರತಿ ಶಾಸಕರಿಗೆ ₹25 ಲಕ್ಷ ಅನುದಾನ ನೀಡಲಾಗುತ್ತದೆ. ಶಾಸಕರು ಖಾಸಗಿ ಮತ್ತು ಅನುದಾನಿತ ಶಾಲೆಗಳನ್ನು ಪರಿಗಣನೆಗೆ ತೆಗೆದುಕೊಂಡು ಅನುದಾನ ನೀಡಬೇಕು’ ಎಂದರು.

ವೈದ್ಯ ಡಾ.ಜಿ.ಆರ್.ದೇಶಪಾಂಡೆ, ಉದಯಕುಮಾರ ಕಮ್ಮಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.