ಸೋಮವಾರ, ಡಿಸೆಂಬರ್ 6, 2021
25 °C

ಬೆಳೆ ಹಾನಿ ಪರಿಹಾರ ನೀಡಲು ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಿರವಾರ: ಅಕಾಲಿಕ ಮಳೆಗೆ ಹಾನಿಗೊಳಗಾಗಿರುವ ಬೆಳೆ ಸಮೀಕ್ಷೆ ಮಾಡಿ, ಕೂಡಲೇ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ವಿಜಯೇಂದ್ರ ಹುಲಿನಾಯಕ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.

ನಿರಂತರವಾಗಿ ಸುರಿದ ಅಕಾಲಿಕ ಮಳೆಯಿಂದಾಗಿ ರೈತರು ಬೆಳೆದ ಭತ್ತ, ತೊಗರಿ, ಹತ್ತಿ, ಮೆಣಸಿಕಾಯಿ, ಸಜ್ಜೆ ಸೇರಿದಂತೆ ಪ್ರತಿಯೊಂದು ಬೆಳೆಯು ನಾಶವಾಗಿದ್ದು, ಕೂಡಲೇ ನಷ್ಟವಾದ ಬೆಳೆಯನ್ನು ಸರ್ವೆ ಮಾಡಿ ಒಂದು ಹೆಕ್ಟೇರ್ ಪ್ರದೇಶಕ್ಕೆ ಕನಿಷ್ಠ ₹ 50 ಸಾವಿರ ಪರಿಹಾರ ಒದಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜ ಬೊಮ್ಮನಾಳ ಉಪಾಧ್ಯಯ ವೀರೇಶ ಗುಡದಿನ್ನಿ, ಹುಲಿಗೆಪ್ಪ ಮಡಿವಾಳ, ರಮೇಶ ಅಂಗಡಿ, ಎಚ್.ಕೆ.ಚನ್ನಬಸವ, ಚಂದ್ರು ಹಡಪದ, ಎಚ್.ಕೆ.ಬಸವರಾಜ, ಬಸವರಾಜ ಚಾಗಭಾವಿ, ವೆಂಕಟೇಶ ಲಕ್ಕಂದಿನ್ನಿ, ಕಾಶಪ್ಪ, ಶಿವಪ್ಪ ಸೇರಿದಂತೆ ರೈತರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು