ಬುಧವಾರ, ಅಕ್ಟೋಬರ್ 28, 2020
18 °C

ಅಶೋಕ ಗಸ್ತಿ ಪತ್ನಿಗೆ ರಾಜ್ಯಸಭಾ ಸ್ಥಾನ ನೀಡಲು ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಈಚೆಗೆ ನಿಧನ ಹೊಂದಿದ ರಾಜ್ಯಸಭಾ ಸದಸ್ಯ ಅಶೋಕ ಗಸ್ತಿಯವರ ಸ್ಥಾನಕ್ಕೆ ಅವರ ಪತ್ನಿ ಸುಮಾ ಅವರನ್ನು ನೇಮಕ ಮಾಡಬೇಕು ಎಂದು ರಾಯಚೂರು ನಗರ ಉಸ್ಮಾನಿಯಾ ತರಕಾರಿ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎನ್.ಮಹಾವೀರ ಒತ್ತಾಯಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  40 ವರ್ಷಗಳಿಂದ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ದಿ.ಅಶೋಕ ಗಸ್ತಿ ಅವರನ್ನು ಬಿಜೆಪಿಯು ರಾಜ್ಯಸಭಾ ಸದಸ್ಯರನ್ನಾಗಿ ಆಯ್ಕೆ ಮಾಡಿತ್ತು. ಆದರೆ, ವಿಧಿಯಾಟದಿಂದ ಅಶೋಕ ಗಸ್ತಿಯವರು ನಿಧನರಾದರು. ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಗೆ 28 ವರ್ಷಗಳ ನಂತರ ರಾಜ್ಯಸಭಾ ಸ್ಥಾನವನ್ನು ಬಿಜೆಪಿ ನೀಡಿತ್ತು. ಈಗ ಅದೇ ಸ್ಥಾನವನ್ನು ಅಶೋಕಗಸ್ತಿ ಅವರ  ಪತ್ನಿಗೆ ನೀಡಬೇಕು ಎಂದು ಆಗ್ರಹಿಸಿದರು.

ಸರ್ಕಾರ ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಆಯೋಗದ ಅಧ್ಯಕ್ಷರನ್ನು ಕೂಡಲೇ ನೇಮಕ ಮಾಡಬೇಕು. ಕಾರಣ, ರಾಯಚೂರು ಎಪಿಎಂಸಿಯಲ್ಲಿ ಕಾನೂನು ಬಾಹಿರ ವಾಗಿ ಲೀಸ್ ಕಂ ನಿವೇಶನ ಹಂಚಿಕೆ ಪ್ರಕರಣವನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಆಯೋಗದಲ್ಲಿ ದಾಖಲಿಸಲಾಗಿದೆ. ಕಳೆದ ಎರಡು ವರ್ಷಗಳಿಂದಲೂ ಅಧ್ಯಕ್ಷರ ನೇಮಕವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹಿಂದಿನ ಸಮ್ಮಿಶ್ರ ಹಾಗೂ ಹಾಲಿ ಬಿಜೆಪಿ ಸರ್ಕಾರದಲ್ಲಿ ಆಯೋಗದ ಅಧ್ಯಕ್ಷರನ್ನು ನೇಮಕ ಮಾಡಿಲ್ಲ. ಇದರಿಂದ ಎಸ್‍ಸಿ, ಎಸ್‍ಟಿ ಸಂಬಂಧಿಸಿದ ಅನೇಕ ಪ್ರಕರಣಗಳು ಇತ್ಯರ್ಥವಾಗದೇ ಬಾಕಿ ಉಳಿದುಕೊಂಡಿವೆ ಎಂದು ಹೇಳಿದರು.‌

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು, ಕೂಡಲೇ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಆಯೋಗದ ಅಧ್ಯಕ್ಷರನ್ನು ನೇಮಕಕ್ಕೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರಭುನಾಯಕ, ಉಪಾಧ್ಯಕ್ಷ ಮಹಮ್ಮದ ಶಾಹಖಾನ್, ಬಸವರಾಜ, ಕೆ.ವಿ ಖಾಜಪ್ಪ, ಉದಯ, ಹನುಮಂತು, ಭೀಮಣ್ಣ ಬಿ.ಸಿ, ರಮೇಶ, ಮಹೇಶ  ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು