ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆಗೆ ಒತ್ತಾಯ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ ಆರಂಭ
Last Updated 1 ಜನವರಿ 2022, 12:39 IST
ಅಕ್ಷರ ಗಾತ್ರ

ಮಾನ್ವಿ: ‘ಮಾನ್ವಿ ಪಟ್ಟಣದಲ್ಲಿ ನಿರ್ಮಾಣಗೊಂಡಿರುವ ತಾಯಿ-ಮಕ್ಕಳ ಆಸ್ಪತ್ರೆಯ ಉದ್ಘಾಟಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜನಶಕ್ತಿ ಕೇಂದ್ರ ಸಂಘಟನೆಯ ಕಾರ್ಯಕರ್ತರು ಶನಿವಾರ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.

ಮಾನ್ವಿ ಪಟ್ಟಣದಲ್ಲಿ ₹ 11ಕೋಟಿ ವೆಚ್ಚದಲ್ಲಿ ತಾಯಿ ಮಕ್ಕಳ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡು ವರ್ಷ ಕಳೆಯುತ್ತಾ ಬಂದಿದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಇದುವರೆಗೂ ಉದ್ಘಾಟನೆಯಾಗಿಲ್ಲ. ಈ ಕುರಿತು ಅನೇಕ ಬಾರಿ ಮನವಿ ಪತ್ರ ಸಲ್ಲಿಸಿದ್ದರೂ ಪ್ರಯೋಜನಾವಗಿಲ್ಲ’ ಎಂದು ಧರಣಿನಿರತರು ದೂರಿದರು.

‘ ತಾಲ್ಲೂಕಿನ ಯರಮಲದೊಡ್ಡಿ, ಬಸವಣ್ಣ ಕ್ಯಾಂಪ್, ಲಕ್ಕಂದಿನ್ನಿ ಗ್ರಾಮಗಳಿಗೆ ಕುಡಿಯುವ ನೀರು, ರಸ್ತೆಯಂತಹ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಖಾಸಗಿ ವ್ಯಕ್ತಿಗಳ ಅಧೀನದಲ್ಲಿರುವ ವಕ್ಫ್ ಆಸ್ತಿಯನ್ನು ಸರ್ಕಾರದ ವಶಕ್ಕೆ ಪಡೆಯಬೇಕು, ಮಾನ್ವಿ ಪಟ್ಟಣದಲ್ಲಿ ಡಾ.ಬಿ.ಆರ್.ಅಬೇಡ್ಕರ್ ಮತ್ತು ಜಗಜೀವನರಾಮ್ ಭವನಗಳನ್ನು ನಿರ್ಮಿಸಬೇಕು, ತಾಯಿ-ಮಕ್ಕಳ ಆಸ್ಪತ್ರೆಯನ್ನು ಆದಷ್ಟು ಬೇಗನೆ ಉದ್ಘಾಟಿಸಬೇಕು ಎಂದು ಧರಣಿನಿರತರು ಒತ್ತಾಯಿಸಿದರು.

ಧರಣಿ ಸ್ಥಳಕ್ಕೆ ತಹಶೀಲ್ದಾರ್‌ಪರಶುರಾಮ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸ್ಟೆಲ್ಲಾ ವರ್ಗೀಸ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರಯ್ಯ ಮತ್ತಿತರ ಅಧಿಕಾರಿಗಳು ಭೇಟಿ ನೀಡಿ ಧರಣಿನಿರತರ ಜತೆ ಚರ್ಚಿಸಿದರು. ಜ.5ರಂದು ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟಿಸಲಾಗುವುದು. ಗ್ರಾಮಗಳಿಗ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದರು.

ಜನಶಕ್ತಿ ಕೇಂದ್ರ ಸಂಘಟನೆಯ ಪ್ರಧಾನ ಸಂಚಾಲಕ ಪ್ರಭುರಾಜ ಕೊಡ್ಲಿ ಮಾತನಾಡಿ, ‘ ಈ ಹಿಂದೆ ಹಲವು ಬಾರಿ ಭರವಸೆ ನೀಡಲಾಗಿದ್ದರೂ ಬೇಡಿಕೆಗಳನ್ನು ಈಡೇರಿಸಿಲ್ಲ. ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆಯಾಗುವವರಿಗೆ ಧರಣಿ ಮುಂದುವರಿಸಲಾಗುವುದು’ ಎಂದು ತಿಳಿಸಿದರು.

ಜನಶಕ್ತಿ ಕೇಂದ್ರ ಸಂಘಟನೆಯ ಇತರ ಪದಾಧಿಕಾರಿಗಳಾದ ಎಸ್.ಎಂ.ಶಾನವಾಜ್, ಅಬ್ರಾಹಂ ಪನ್ನೂರು, ಜಯರಾಜ್ ಕೊಡ್ಲಿ, ಈರಣ್ಣ ಗವಿಗಟ್, ಯೇಸುರಾಜ್ ಅಮರೇಶ್ವರ ಕ್ಯಾಂಪ್, ರಾಮು ದೊಡ್ಡಿ, ಸುರೇಶ ಜಾಲಾಪೂರ, ಮೈನುದ್ದೀನ್, ಹನುಮಂತ ಮಾನ್ವಿ, ಶಂಕರ ಜಗ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT