ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಣ್ಣ-ಪುಟ್ಟ ಸಮಸ್ಯೆಗಳ ಶೀಘ್ರ ಇತ್ಯರ್ಥಗೊಳಿಸಲು ಅಧಿಕಾರಿಗಳಿಗೆ ಸೂಚನೆ: ಬೋಸರಾಜು 

ಸಾರ್ವಜನಿಕ ಕುಂದುಕೊರತೆ ಆಲಿಸಿದ ಸಚಿವ
Published 11 ಡಿಸೆಂಬರ್ 2023, 14:31 IST
Last Updated 11 ಡಿಸೆಂಬರ್ 2023, 14:31 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯ ವಿವಿಧ ತಾಲ್ಲೂಕು ಹಾಗೂ ಗ್ರಾಮೀಣ ಭಾಗದ ಜನರ ಕುಂದು–ಕೊರತೆಗಳನ್ನು‌ ಸಚಿವ ಎನ್.ಎಸ್.ಬೋಸರಾಜು ತಮ್ಮ ನಿವಾಸದಲ್ಲಿ ಆಲಿಸಿದರು. ಸ್ಥಳದಲ್ಲಿಯೇ ಪರಿಹರಿಸಬಹುದಾದ ಸಣ್ಣ-ಪುಟ್ಟ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು.

ಭಾನುವಾರ ಸಚಿವರ ಮನೆಗೆ ಸಾರ್ವಜನಿಕರು ಭೇಟಿ ನೀಡಿ ವಿವಿಧ ಸಮಸ್ಯೆಗಳನ್ನು ವಿವರಿಸಿದರು. ಕೆಲವರು ಅಹವಾಲು ಸಲ್ಲಿಸಿದರು.

ಸಚಿವರು ಸಮಸ್ಯೆಗಳಿಗೆ ಅನುಗುಣವಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ಮಾಡಿ, ಕಚೇರಿಯಲ್ಲಿ ಬಗೆಹರಿಸಬಹುದಾದ ಸಣ್ಣ-ಪುಟ್ಟ ಸಮಸ್ಯೆಗಳನ್ನು ಶೀಘ್ರ ಪರಿಹರಿಸಬೇಕು. ಸಾರ್ವಜನಿಕರು ಕಚೇರಿಗೆ ಅಲೆಯದಂತೆ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಕಾಂಗ್ರೆಸ್ ಮುಖಂಡರಾದ ಶರಣಯ್ಯ ನಾಯಕ ಗುಡದಿನ್ನಿ, ಬಸವರಾಜ, ರಾಜಶೇಖರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT