ಗುರುವಾರ , ಜುಲೈ 29, 2021
21 °C

ವಿಮಾ ಸಪ್ತಾಹ ಯೋಜನೆ ಮಾಹಿತಿ ಕಾರ್ಯಾಗಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಪ್ರಧಾನಮಂತ್ರಿ ಜೀವನ ಜ್ಯೋತಿ ಮತ್ತು ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಿಂದ ಸಂಕಷ್ಟದ ಸಮಯದಲ್ಲಿ ಕುಟುಂಬಕ್ಕೆ ಆಸರೆಯಾಗಲಿದ್ದು ಯೋಜನೆಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಲೀಡ್ ಬ್ಯಾಂಕ್ ಮ್ಯಾನೇಜರ್ ರಣಜೀತ ಕುಮಾರ ಹೇಳಿದರು.

ಇಲ್ಲಿನ ನಗರಸಭೆ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕೌಶಲಾಭಿವೃದ್ಧಿ ಇಲಾಖೆ, ನಗರಸಭೆ ಹಾಗೂ ಲೀಡ್ ಬ್ಯಾಂಕ್ ಸಹಯೋಗದೊಂದಿಗೆ ಡೇ- ನಲ್ಮ್ ಯೋಜನೆಯಡಿ ರಚನೆಗೊಂಡಿರುವ ನಗರ ಮಹಿಳಾ ಸ್ವ - ಸಹಾಯ ಸಂಘದ ಸದಸ್ಯರಿಗಾಗಿ ಹಮ್ಮಿಕೊಂಡಿದ್ದ ವಿಮಾ ಸಪ್ತಾಹ ಯೋಜನೆಯ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು.

‘ಪ್ರತಿ ವರ್ಷ ₹ 330ರಲ್ಲಿ ₹ 2 ಲಕ್ಷ ಜೀವ ವಿಮೆಯನ್ನು ಪಡೆದು ಕೊಳ್ಳಬಹುದಾಗಿದೆ. ಪ್ರಧಾನಮಂತ್ರಿ ಸುರಕ್ಷಾ ವಿಮಾ ಯೋಜನೆಯಲ್ಲಿ ವರ್ಷಕ್ಕೆ ₹ 12 ಗಳ ಪ್ರೀಮಿಯಂ ಠೇವಣಿ ಇರಿಸುವ ಮೂಲಕ ಸರ್ಕಾರದಿಂದ ₹ 2 ಲಕ್ಷ ಮರಣ ವಿಮೆ ಖಾತರಿ ಪಡೆಯಬಹುದು‘ ಎಂದು ಯೋಜನೆಗಳ ಕುರಿತು ಮಾಹಿತಿ ನೀಡಿದರು.

ನಗರಸಭೆ ಪೌರಾಯುಕ್ತ ವೆಂಕಟೇಶ ಕುಮಾರ ಉದ್ಘಾಟಿಸಿದರು. ವೀಣಾ ರಾಜೇಶ್ವರಿ, ರಂಜಿತ್ ಕುಮಾರ, ದೊಡ್ಡ ಮನಿ, ನಾಗರಾಜ ಎನ್.ಜಿ.ಓ, ದಂಡಪ್ಪ ಬಿರಾದರ್ ಹಾಗೂ ಇತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.