ಸರ್ಕಾರದಿಂದ ಕಾರ್ಮಿಕರ ಶೋಷಣೆ: ಗಿರಿಯಪ್ಪ ಪೂಜಾರಿ

ದೇವದುರ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಪೊರೇಟ್ ಹಾಗೂ ಬಂಡವಾಳ ಶಾಹಿಗಳ ಕೈಗೊಂಬೆಯಾಗಿ, ಕಾರ್ಮಿಕ ವರ್ಗವನ್ನು ಶೋಷಣೆಗೆ ಒಳಪಡಿಸಿದೆ ಎಂದು ಸಿಐಟಿಯು ತಾಲ್ಲೂಕು ಕಾರ್ಯದರ್ಶಿ ಗಿರಿಯಪ್ಪ ಪೂಜಾರಿ ಆರೋಪಿಸಿದರು.
ಪಟ್ಟಣದ ಎಪಿಎಂಸಿ ಆವರಣದ ಕಾರ್ಮಿಕ ಕಚೇರಿಯಲ್ಲಿ ಭಾನುವಾರ ನಡೆದ ಕಾರ್ಮಿಕ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡಿ, ದುಡಿಯುವ ವರ್ಗದ ಕತ್ತು ಇಸುಕಿದೆ. ಬಡ ಕಾರ್ಮಿಕರನ್ನು ಬೀದಿಗೆ ತಂದಿದೆ. ಮೂರು ಕೃಷಿ ಕಾಯ್ದೆಗಳ ಮೂಲಕ ರೈತರನ್ನು ಒಕ್ಕಲೆ ಬ್ಬಿಸುವ ಜತೆಗೆ ಬಡವರ ಬದುಕು ಕಿತ್ತುಕೊಳ್ಳಲು ಯತ್ನಿಸಿತು ಎಂದರು.
ನಿರಂತರ ಬೆಲೆ ಏರಿಕೆಯಿಂದ ಬಡವರು ಬದುಕು ನಡೆಸುವುದು ಕಷ್ಟ ವಾಗಿದೆ. ಕೇಂದ್ರ ಸರ್ಕಾರ ಏನು ನಡೆ ದಿಲ್ಲ ಎನ್ನುವಂತೆ ವರ್ತಿಸುತ್ತಿದೆ ಎಂದರು.
ಸಿಐಟಿಯು ತಾಲ್ಲೂಕು ಅಧ್ಯಕ್ಷೆ ರಂಗಮ್ಮ ಅನ್ವರ್, ಮುಖಂಡರಾದ ರಮಾ ದೇವಿ, ಮರಿಯಮ್ಮ, ಯೂಸೂಫ್, ಮನೋಹರ್, ಶ್ರೀಲೇಖಾ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.