ಬುಧವಾರ, ಏಪ್ರಿಲ್ 1, 2020
19 °C

ರಸಪ್ರಶ್ನೆ ಸ್ಪರ್ಧೆ: ಬಸಶ್ರೀ ಶಾಲೆ ಪ್ರಥಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ನಗರದ ನವೋದಯ ಎಂಜಿನಿಯರಿಂಗ್‌ ಮಹಾವಿದ್ಯಾಲಯದಲ್ಲಿ ‘ಇಸ್ರೋ’ ಸಂಸ್ಥೆಯಿಂದ ವಿಕ್ರಮ್ ಸಾರಾಭಾಯಿ ಜನ್ಮಶತಮಾನೋತ್ಯವ ಕಾರ್ಯಕ್ರಮದ ಅಂಗವಾಗಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ರಸಪ್ರಶ್ನೆ ಸ್ಪರ್ಧೆಯಲ್ಲಿ ನಗರದ ಸುಗುಣ ಶಿಕ್ಷಣ ಸಂಸ್ಥೆಯ ಬಸವಶ್ರೀ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.

9ನೇ ತರಗತಿ ವಿದ್ಯಾರ್ಥಿಗಳಾದ ವಾಗೀಶ ಹಿರೇಮಠ ಮತ್ತು ಮಲ್ಲಿಕಾರ್ಜನ ಗೌಡ ತಂಡವು ವಿಜೇತವಾಗಿದೆ. ಪ್ರಥಮ ಸ್ಥಾನ ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿರುವುದಕ್ಕೆ ಸಂಸ್ಥೆಯ ಅಧ್ಯಕ್ಷ ಡಾ.ಎಂ. ಬಸವನಗೌಡ, ಕಾರ್ಯದರ್ಶಿ, ಮಲ್ಲಿಕಾರ್ಜುನ ಪಾಟೀಲ ಹಾಗೂ ಸಂಸ್ಥಾಪಕಿ ಲಲಿತಾ, ಶಿಕ್ಷಕರಾದ ವಿಜಯಲಕ್ಷ್ಮೀ, ಹುಸೇನಪ್ಪ, ಮಲ್ಲಿಕಾರ್ಜುನ ಸ್ವಾಮಿ ಅಭಿನಂದಿಸಿದ್ದಾರೆ.   

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)