ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ: ಬಿ.ವಿ.ನಾಯಕ

Published 3 ಮೇ 2024, 14:04 IST
Last Updated 3 ಮೇ 2024, 14:04 IST
ಅಕ್ಷರ ಗಾತ್ರ

ಕವಿತಾಳ: ‘ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ. ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗುವುದು ಶತಸಿದ್ಧ. ಈ ಕುರಿತು ಯಾವುದೇ ಸಂದೇಹ ಬೇಡ’ ಎಂದು ಮಾಜಿ ಸಂಸದ ಬಿ.ವಿ.ನಾಯಕ ಹೇಳಿದರು.

ಪಟ್ಟಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು,‘ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ದೇಶ ಎಲ್ಲ ರಂಗಗಳಲ್ಲೂ ಪ್ರಗತಿ ಸಾಧಿಸಿದೆ. ಬಿಜೆಪಿ ಪಕ್ಷಕ್ಕೆ ಮೋದಿ ಅವರ ಸಮರ್ಥ ನಾಯಕತ್ವವಿದೆ. ಆದರೆ ಕಾಂಗ್ರೆಸ್‌ ಪಕ್ಷವನ್ನು ಮುನ್ನಡೆಸಲು ಸಮರ್ಥ ನಾಯಕರಿಲ್ಲ. ವೈಯಕ್ತಿಕ ಹಿತಾಸಕ್ತಿಗಳನ್ನು ಬದಿಗಿಟ್ಟು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಒಟ್ಟಾಗಿ ಕೆಲಸ ಮಾಡುವುದು ಅಗತ್ಯ’ ಎಂದರು.

‘ಯಾವುದೇ ಸಂದರ್ಭದಲ್ಲಿ ರಾಜ್ಯ ಸರ್ಕಾರ ಪತನ ಆಗಬಹುದು. ಕಾರ್ಯಕರ್ತರು ಚುನಾವಣೆ ಎದುರಿಸಲು ಸನ್ನದ್ಧರಾಗಿರಬೇಕು. ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದು, ಲೋಕಸಭಾ ಚುನಾವಣೆ ಟಿಕೆಟ್‌ ಕೈ ತಪ್ಪಿದ್ದರೂ ಮೋದಿ ಅವರ ಸಮರ್ಥ ನಾಯಕತ್ವದಲ್ಲಿ ಮುನ್ನಡೆಯುತ್ತಿರುವ ಬಿಜೆಪಿಯಲ್ಲಿ ಭವಿಷ್ಯ ಕಂಡುಕೊಳ್ಳಲು ಪಕ್ಷದ ಅಭ್ಯರ್ಥಿ ಪರವಾಗಿ ಕೆಲಸ ಮಾಡುತ್ತಿದ್ದೇನೆʼ ಎಂದು ಹೇಳಿದರು.

ಮುಖಂಡರಾದ ಮಲ್ಲಿಕಾರ್ಜುನ ಜಕ್ಕಲದಿನ್ನಿ, ಉದಯಕುಮಾರ ಮತ್ತು ಎಂ.ರಾಘವೇಂದ್ರ ಮಾತನಾಡಿದರು.

ಮುಖಂಡರಾದ ವೀರೇಶ ಬೆಟ್ಟದೂರು, ಕೆ.ನಾಗಲಿಂಗಸ್ವಾಮಿ, ನರಸಿಂಹ ನಾಯಕ, ವೀರಭದ್ರಪ್ಪಗೌಡ, ತಿಮ್ಮನಗೌಡ ಹಣಿಗಿ, ಯಮನಪ್ಪ ದಿನ್ನಿ, ಹನುಮರಡ್ಡಿ, ಎಚ್.ಬಸವರಾಜ, ಗಫೂರಪಾಷಾ, ಮೌನೇಶ ಪೂಜಾರಿ, ಮಲ್ಲಪ್ಪ ಬಸಾಪುರ, ಹುಚ್ಚಪ್ಪ ವಡವಟ್ಟಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT