ಜಾಲಹಳ್ಳಿ: ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಶುಕ್ರವಾರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲಾಗಿದೆ ಎಂದು ಚುನಾವಣಾಧಿಕಾರಿ ಅಮರೇಶ ತಿಳಿಸಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ನಿರ್ದೇಶಕ ಗೋವಿಂದಪ್ಪ ನಾಯಕ ಹಲಗೇರಿ ಒಬ್ಬರೇ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು.

ಉಪಾಧ್ಯಕ್ಷ ಸ್ಥಾನಕ್ಕೆ ಖುರ್ಷಿದ್ ಪಟೇಲ್, ಸುರೇಶ ವಿಭೂತಿ ನಾಮಪತ್ರ ಸಲ್ಲಿಸಿದ್ದರು. ಒಟ್ಟು 12 ಜನ ನಿರ್ದೇಶಕರು, ತಾಲ್ಲೂಕು ಸಹಕಾರ ಸಂಘದ ಪ್ರತಿನಿಧಿ ಒಬ್ಬರು ಮತದಾನಕ್ಕೆ ಬಂದಿದ್ದರು. ಖುರ್ಷಿದ್ ಪಟೇಲ್ 10 ಮತ ಪಡೆದು ಗೆಲವು ತಮ್ಮದಾಗಿಸಿಕೊಂಡರು.

ಈ ಹಿಂದಿನ ಅಡಳಿತ ಮಂಡಳಿ ಸಮಯಕ್ಕೆ ಸರಿಯಾಗಿ ಚುನಾವಣೆ ನಡೆದಿರುವುದರಿಂದ ಮುಂದಿನ 6 ವರ್ಷ ಹಿಂದಿನ ನಿರ್ದೇಶಕರು ಸಹಕಾರ ಸಂಘದ ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡದಂತೆ ಕಲಬುರಗಿ ಹೈಕೋರ್ಟ್ ಪೀಠ ಆದೇಶ ನೀಡಿತ್ತು. ಆ ತಪ್ಪನ್ನು ನೂತನ ಆಡಳಿತ ಮಂಡಳಿ ಮಾಡದೇ ಸರಿಯಾಗಿ ರೈತರಿಗೆ, ಸಣ್ಣ ವ್ಯಾಪಾರಿಗಳಿಗೆ ಸಾಲ ವಿತರಣೆ ಮಾಡಬೇಕು ಎಂದು ಮುದ್ದಪ್ಪ ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-32-1071079901

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.