ಜಾಲಹಳ್ಳಿ: ಸುತ್ತಲಿನ ಗ್ರಾಮಗಳಲ್ಲಿ ಶುಕ್ರವಾರ ಬೆಳಿಗ್ಗೆ ಅರ್ಧ ಗಂಟೆ ಉತ್ತಮ ಮಳೆಯಾಗಿದೆ. ವಾತಾವರಣ ತಂಪಾಗಿದೆ.

ಶುಕ್ರವಾರ ಗುಡುಗು, ಮಿಂಚು, ಗಾಳಿ ಸಮೇತವಾಗಿ ಮಳೆ ಸುರಿಯಿತು. ಮಳೆ ಕೃಷಿ ಚಟುವಟಿಕೆಗಳಿಗೆ ಚಾಲನೆ ನೀಡುವುದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಪಟ್ಟಣದಲ್ಲಿ ಹಾದು ಹೋಗಿರುವ ಕಲ್ಮಲಾ-ತಿಂಥಣಿ ಬ್ರಿಡ್ಜ್ ರಾಜ್ಯ ಹೆದ್ದಾರಿಯ ರಸ್ತೆ ಪಕ್ಕದಲ್ಲಿ ನಿರ್ಮಿಸಿರುವ ಚರಂಡಿಗಳಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗದೆ ರಸ್ತೆಯಲ್ಲಿ ಸಂಗ್ರಹವಾಗುತ್ತಿದೆ. ಸಂಚಾರಕ್ಕೆ ತೊಂದರೆ ಉಂಟಾಗಿದೆ. ರಸ್ತೆ ಪಕ್ಕದಲ್ಲಿರುವ ವಿವಿಧ ವಾಣಿಜ್ಯ ಅಂಗಡಿಗಳ ಮಾಲೀಕರು ಚರಂಡಿಗಳ ಮೇಲೆ ಮಣ್ಣು ಹಾಕಿ ಮಳೆ ನೀರು ಚರಂಡಿಯಲ್ಲಿ ಹೋಗದಂತೆ ಮಾಡಿದ್ದಾರೆ.

ಪಟ್ಟಣದ ಕೆಲ ಬಡಾವಣೆಗಳಲ್ಲಿ ಚರಂಡಿ ವ್ಯವಸ್ಥೆ ಮಾಡದೇ ಇರುವುದರಿಂದ ಮಳೆ ನೀರು ಸಂಗ್ರಹವಾಗಿರುವುದು ಕಂಡಬಂತು. ಬಸವೇಶ್ವರ ವೃತ್ತದಿಂದ ವಾಲ್ಮೀಕಿ ವೃತ್ತದವರೆಗೆ ರಸ್ತೆಯ ಮೇಲೆ ಅಕ್ರಮವಾಗಿ ಹಾಕಿರುವ ಅಂಗಡಿಗಳನ್ನು ಅಧಿಕಾರಿಗಳು ತೆರವುಗೊಳಿಸಿ ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-32-1770603284

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.