ಜಾಲಹಳ್ಳಿ: ಸಮೀಪದ ಮ್ಯಾಕಲದೊಡ್ಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೊಸ ಕಟ್ಟಡಕ್ಕೆ ಇನ್ನೂ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ. ಕಾರಣ ವಿದ್ಯಾರ್ಥಿಗಳು ಶಿಥಿಲಗೊಂಡ ಕಟ್ಟಡದಲ್ಲಿ ಕಲಿಯುವಂತಾಗಿದೆ.

ಇಲ್ಲಿ 1 ರಿಂದ 7ನೇ ತರಗತಿವರೆಗೆ ತರಗತಿಗಳು ನಡೆಯುತ್ತವೆ. 111 ವಿದ್ಯಾರ್ಥಿಗಳಿದ್ದಾರೆ. 6 ಮಂಜೂರಾತಿ ಹುದ್ದೆಗಳಿದ್ದು, ನಾಲ್ವರು ಕಾಯಂ ಶಿಕ್ಷಕರಿದ್ದಾರೆ. ಇಬ್ಬರು ಅತಿಥಿ ಶಿಕ್ಷಕರಿದ್ದಾರೆ.

ಗ್ರಾಮದಲ್ಲಿ ಹಳೆ ಕಟ್ಟಡ ಇದೆ. ಅದರಲ್ಲಿ ಮೂರು ಕೋಣೆಗಳಿವೆ. ಅವೂ ಶಿಥಿಲಗೊಂಡಿವೆ. ಅದರಲ್ಲಿಯೇ ಬೋಧನೆ ಮಾಡಲಾಗುತ್ತಿದೆ.

ಗ್ರಾಮದ ಬಳಿಯ ಸರ್ಕಾರಿ ಜಮೀನಿನಲ್ಲಿ 2019-20ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ₹48 ಲಕ್ಷ ಅನುದಾನದಲ್ಲಿ ನಾಲ್ಕು ಕೋಣೆಗಳಿರುವ ಹೊಸ ಕಟ್ಟಡ ನಿರ್ಮಿಸಲಾಗಿದೆ.

ಗ್ರಾಮಸ್ಥರ ಒತ್ತಾಯದ ಮೇರೆಗೆ ಅದೇ ಯೋಜನೆಯಡಿ ಇನ್ನೂ ಎರಡು ಕೋಣೆಗಳ ನಿರ್ಮಾಣಕ್ಕೆ ₹35 ಲಕ್ಷ ಮಂಜೂರು ಮಾಡಲಾಗಿದೆ. ಕಟ್ಟಡ ಕಾಮಗಾರಿ ಪೂರ್ಣಗೊಂಡಿಲ್ಲ. ಅದೂ ಅಲ್ಲದೇ ಈಚೆಗೆ ಇನ್ನೂಂದು ಕೋಣೆ ನಿರ್ಮಾಣಕ್ಕೆ ₹10 ಲಕ್ಷ ಅನುದಾನ ನೀಡಲಾಗಿದೆ.

ಎರಡು ವರ್ಷಗಳ ಹಿಂದೆ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿರುವಾಗಲೇ ಹೊಸ ಕಟ್ಟಡಕ್ಕೆ ಸ್ಥಳಾಂತರ ಮಾಡಿಕೊಳ್ಳಬೇಕು ಎಂದು ಶಿಕ್ಷಣ ಇಲಾಖೆ ಸಿದ್ದತೆ ಮಾಡಿಕೊಂಡಿತ್ತು. ಆದರೆ, ಪಾಲಕರು ಸಭೆ ಸೇರಿ ಹೊಸ ಶಾಲೆಯಲ್ಲಿ ಅಗತ್ಯ ಸೌಲಭ್ಯ ಇಲ್ಲದೇ ಇರುವುದರಿಂದ ಬೇಡ ಎಂದು ತೀರ್ಮಾನಿಸಿದರು. ಅಗತ್ಯ ಸೌಲಭ್ಯ ಕಲ್ಪಿಸಲು ಗ್ರಾ.ಪಂ ಅಧಿಕಾರಿಗಳಿಗೆ ಮನವಿ ಮಾಡಿ ತಿಳಿಸಲಾಗಿತ್ತು.

ಪ್ರಮುಖವಾಗಿ ಮಕ್ಕಳಿಗೆ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಸಂಪರ್ಕ, ಬಿಸಿಯೂಟ ಕೋಣೆ ಇಲ್ಲವಾಗಿದೆ.

ಈಚೆಗೆ ನರೇಗಾ ಯೋಜನೆಯಡಿ ಸುಮಾರು ₹7 ಲಕ್ಷ ವೆಚ್ಚದಲ್ಲಿ ಕಟ್ಟಡದ ಹಿಂದೆ ರಕ್ಷಣಾ ಗೋಡೆ ನಿರ್ಮಿಸಲಾಗಿದೆ. ಉಳಿದಂತೆ ಶಾಲೆಯ ಹಿಂದೆ, ಪಕ್ಕದಲ್ಲಿಯೇ ಗೋಡೆ ನಿರ್ಮಿಸಿಲ್ಲ.

ಇನ್ನೂ ₹35 ಲಕ್ಚ ವೆಚ್ಚದಲ್ಲಿ ಎರಡನೇ ಹಂತದಲ್ಲಿ ಮಂಜೂರಾದ ಅನುದಾನದಲ್ಲಿ ಕಟ್ಟಡ ನೆಂಟಲ್ವರೆಗೆ ಮಾತ್ರ ನಿರ್ಮಿಸಿ ಬಿಟ್ಟಿದ್ದಾರೆ.

ಆ ಕಟ್ಟಡದಲ್ಲಿ ಜಾಲಿ ಗಿಡಗಳು ಬೆಳೆದಿವೆ. ಸರ್ಕಾರದ ಅನುದಾನ ಬೇಕಾ ಬಿಟ್ಟಿಯಾಗಿ ಬಳಕೆ ಮಾಡಲಾಗುತ್ತಿದೆ. ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಗ್ರಾಮದ ಬಡ ಮಕ್ಕಳಿಗೆ ಅನುಕೂಲ ಕಲ್ಪಿಸಬೇಕು ಎಂದು ವಿದ್ಯಾವಂತ ನಾಗರಿಕರು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-32-1952945817

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.