ಜಾಲಹಳ್ಳಿ: ಜಾಲಹಳ್ಳಿ ಹಾಗೂ ಬಿ.ಗಣೇಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ಸೇರಿಸಿ ನರೇಗಾ ನಿರ್ವಹಣೆ ಮಾಡಿದ ಅಧಿಕಾರಿಗಳು ಸುಮಾರು ₹16.82 ಲಕ್ಷ ಮರಳಿ ಇಲಾಖೆಯ ಬ್ಯಾಂಕ್ ಖಾತೆಗೆ ಜಮೆ ಮಾಡುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆದೇಶ ಮಾಡಿದ್ದಾರೆ.

ಕಳೆದ ವರ್ಷ ಕೇಂದ್ರ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ವಿಶೇಷ ಅಧಿಕಾರಿಗಳ ತಂಡ ದೇವದುರ್ಗ ಹಾಗೂ ಅರಕೇರ ತಾಲ್ಲೂಕಿನ ತಲಾ ಒಂದು ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಕಾಮಗಾರಿಗಳ ಸ್ಥಳ ಹಾಗೂ ಕಡತಗಳ ತನಿಖೆ ಮಾಡಿ ವರದಿ ಸಲ್ಲಿಸಿದ್ದರು. ಆ ವರದಿ ಅನ್ವಯ ಆದೇಶ ಮಾಡಲಾಗಿದೆ.

ತಾ.ಪಂ ಸಹಾಯಕ ನಿರ್ದೇಶಕ (ನರೇಗಾ) ಅಣ್ಣರಾವ್ ನಾಯಕ, ಜಾಲಹಳ್ಳಿ ಪಿಡಿಒ ನರಸಪ್ಪ, ಗ್ರಾ.ಪಂ ಅಧ್ಯಕ್ಷೆ ವಿಜಯಲಕ್ಷ್ಮಿ ಯಂಕೋ, ಬಿ.ಗಣೇಕಲ್ ಗ್ರಾ.ಪಂ ಅಧ್ಯಕ್ಷೆ ರಂಗಮ್ಮ ಸೋಮಯ್ಯ, ಪಿಡಿಒ ಶರಣಬಸಯ್ಯ ಸ್ವಾಮಿ, ತಾಂತ್ರಿಕ ಸಂಯೋಜಕ ಪರಿಮಿ ಸಾಗರ್, ಎಂಜನಿಯರ್ ರವಿಕಿರಣ ಅವರಿಂದ ಹಣ ವಸೂಲಿ ಮಾಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಮಾನವ ದಿನಗಳನ್ನು ಬಳಕೆ ಮಾಡಿ ಹೆಚ್ಚು ಕೂಲಿಕಾರ್ಮಿಕರಿಗೆ ಕೆಲಸ ನೀಡಲಾಗಿತ್ತು. ಆ ಕಾಮಗಾರಿಗಳ ಸ್ಥಳ ಪರಿಶೀಲನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಕೆಲಸದ ಪ್ರಮಾಣ ಕಂಡುಬಂದಿರುವ ಕಾರಣ ಹಾಗೂ ಪ್ರತಿ ವರ್ಷ ಒಂದೇ ಸ್ಥಳದಲ್ಲಿಯೇ ಹೆಚ್ಚು ಮಾನವ ದಿನಗಳನ್ನು ಬಳಕೆ ಮಾಡಿದ್ದಾರೆ. ಆದರೆ ಆ ಪ್ರಮಾಣದ ಕೆಲಸ ಆಗದಿರುವುದನ್ನು ಕೇಂದ್ರ ತಂಡ ಗುರುತಿಸಿ ಕ್ರಮಕ್ಕೆ ವರದಿ ಸಲ್ಲಿಸಿರಬಹುದು ಎಂದು ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-32-1735005852

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.