ಜಾಲಹಳ್ಳಿ: ಪಟ್ಟಣದ ಪೊಲೀಸ್ ಠಾಣೆಯ ನೂತನ ಕಟ್ಟಡವನ್ನು ಶಾಸಕಿ ಕರೆಮ್ಮ ಜಿ.ನಾಯಕ ಅವರು ಶುಕ್ರವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಶಾಸಕಿ,‘ಕ್ಷೇತ್ರದಲ್ಲಿ ಪೊಲೀಸ್ ಇಲಾಖೆ ಉತ್ತಮವಾಗಿ ಕೆಲಸ ಮಾಡುತ್ತಿದೆ. ಸುಸಜ್ಜಿತ ಕಟ್ಟಡದ ಅವಶ್ಯಕತೆ ಇತ್ತು. ಅದು ಈಗ ಪೂರ್ಣಗೊಂಡಿದೆ’ ಎಂದು ಹೇಳಿದರು.

ಪಟ್ಟಣದಲ್ಲಿ ಮಟ್ಕಾ, ಮದ್ಯ ಅಕ್ರಮ ಮಾರಾಟ ಹಾಗೂ ಜೂಜು ಸೇರಿದಂತೆ ಇತರ ಕಾನೂನು ಬಾಹಿರ ಚಟುವಟಿಕೆಗಳು ನಿರ್ಭಯವಾಗಿ ನಡೆಯುತ್ತಿದೆ ಎಂದು ಕೆಲ ಸಂಘಟನೆಗಳವರು ಮನವಿ ಪತ್ರ ಸಲ್ಲಿಸಿದ್ದಾರೆ. ಅದಷ್ಟು ಬೇಗ ಪೊಲೀಸ್ ಇಲಾಖೆ ಗಮನಹರಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಮಾತನಾಡಿ,‘ಪೊಲೀಸರು ತಮ್ಮ ವೈಯಕ್ತಿಕ ಜೀವನ ಕ್ಕಿಂತಲೂ ಹೆಚ್ಚಾಗಿ ಸಮಾಜದ ಸುರಕ್ಷತೆಗಾಗಿ ದಿನದ 24 ಗಂಟೆ ಕೆಲಸ ಮಾಡುತ್ತಾರೆ. ಈ ಕಟ್ಟಡದ ಉದ್ಘಾಟನೆಯಿಂದ ಜನತೆಗೆ ಹೆಚ್ಚಿನ ಸ್ಪಂದನೆ ಹಾಗೂ ಭದ್ರತೆ ಸಿಗುತ್ತದೆ. ಕಟ್ಟಡದಲ್ಲಿ ಅಧುನಿಕತೆಯ ಸೌಲಭ್ಯಗಳನ್ನು ಸಹ ಒದಗಿಸಲಾಗಿದೆ’ ಎಂದು ತಿಳಿಸಿದರು.

ವೀರಗೋಟದ ಆದಿ ಮೌನೇಶ್ವರ ಮಠದ ಅಡವಿಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಗ್ರಾ.ಪಂ ಅಧ್ಯಕ್ಷೆ ವಿಜಯಲಕ್ಷ್ಮಿ ತೋಟದ, ಭೂ ದಾನಿ ತಿಮ್ಮಣ್ಣ ನಾಯಕ ದಿವಾನ, ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಲಕ್ಷ್ಮಣ ಜ್ಯೋತಿ, ಎಂಜಿನಿಯರ್ ಲಿಂಗರಾಜ, ಗುತ್ತಿಗೆದಾರ ಭೀಮಶಂಕರ ಕಲಬುರಗಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಕುಮಾರ ಸ್ವಾಮಿ, ಜಿ.ಹರಿಶ್, ಡಿವೈಎಸ್ಪಿ ದತ್ತಾತ್ರೇಯ ಕಾರ್ನಾಡ್, ಸಿಪಿಐ ಪುಂಡಲಿಕ, ಪಿ.ಐ ಮಂಜುನಾಥ, ಪಿಎಸ್ಐ ವೈಶಾಲಿ ಝಳಕಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-32-296123308

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.