ಬುಧವಾರ, 27 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಲಹಳ್ಳಿ: ಶಿಕ್ಷಕರ ವರ್ಗಾವಣೆ ತಡೆಯಲು ಒತ್ತಾಯಿಸಿ ಪ್ರತಿಭಟನೆ

Published 5 ಸೆಪ್ಟೆಂಬರ್ 2023, 7:53 IST
Last Updated 5 ಸೆಪ್ಟೆಂಬರ್ 2023, 7:53 IST
ಅಕ್ಷರ ಗಾತ್ರ

ಜಾಲಹಳ್ಳಿ (ರಾಯಚೂರು ಜಿಲ್ಲೆ): ದೇವದುರ್ಗ ತಾಲ್ಲೂಕಿನ ಸರ್ಕಾರಿ ಶಾಲೆಗಳ ಶಿಕ್ಷಕರ ವರ್ಗಾವಣೆ ಅದೇಶವನ್ನು ತಾತ್ಕಾಲಿಕವಾಗಿ ರದ್ದು ಪಡಿಸಿ ಈ ವರ್ಷದ ಶೈಕ್ಷಣಿಕ ವರ್ಷ ಪೂರ್ಣಗೊಳ್ಳುವರೆಗೆ ಯಾವುದೇ ಕಾರಣಕ್ಕೂ ಬಿಡುಗಡೆ ಗೊಳಿಸಬಾರದು ಎಂದು ಒತ್ತಾಯಿಸಿ ಮಂಗಳವಾರ ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಎಸ್ ಎಫ್ ಐ ಸಂಘಟನೆ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.

ತಾಲ್ಲೂಕಿನ 86 ಶಾಲೆಗಳಲ್ಲಿ ಶಿಕ್ಷಕ ಸಂಖ್ಯೆ ಶೂನ್ಯ ಇದೆ. ಆ ಶಾಲೆಗಳ ಸ್ಥಿತಿ ಅಧಿಕಾರಿಗಳು ನಿರ್ವಹಣೆ ಮಾಡುತ್ತಾರೆ. ಎರವಲು ನೀಡಿದರೆ ಸರಿಯಾಗಿ ನಡೆಲು ಸಾಧ್ಯವಾಗುವುದಿಲ್ಲ. ಅತಿಥಿ ಶಿಕ್ಷಕರ ಮೇಲೆಯೇ ಶಾಲೆ ನಡೆಸುವುದು ಎಷ್ಟು ಸರಿಯನ್ನುವುದು ಹೋರಾಟಗಾರರ ಪ್ರಶ್ನಿಸಿದರು.

ಕಲ್ಮಲಾ-ತಿಂಥಣಿ ಬ್ರಿಜ್ ರಾಜ್ಯ ಹೆದ್ದಾರಿ ಯಲ್ಲಿ ಅಂಬೇಡ್ಕರ್ ವೃತ್ತದ ಪ್ರತಿಭಟನೆ ನಡೆಯುತ್ತಿದೆ. ಡಿಡಿಪಿಐ ಕಚೇರಿಯಿಂದ ಕನ್ನನ್ ಪ್ರಭು, ಕ್ಷೇತ್ರ ಶಿಕ್ಷಣಾಧಿಕಾರಿ ಸುಖದೇವ, ಸಿಪಿಐ ಗುಂಡುರಾವ್ ಭೇಟಿ ನೀಡಿ ಸರ್ಕಾರದ ಅದೇಶದ ಪ್ರಕರ ವರ್ಗಾವಣೆ ಯಾಗಿದೆ. ಅದರೆ, ಮುಂದಿನ ಅದೇಶದವರೆಗೆ ಯಾವುದೇ ಶಿಕ್ಷಕರಿಗೆ ಬಿಡುಗಡೆ ಮಾಡುವುದಿಲ್ಲ ಎಂದು ತಿಳಿಸಿದರು. ಅದರೂ ಹೋರಾಟಗಾರರು ಇವರ ಮಾತಿಗೆ ಸೊಪ್ಪು ಹಾಕದೇ ಡಿಡಿಪಿಐ ಅವರು ಸ್ಥಳಕ್ಕೆ ಬರಬೇಕೆಂದು ಪಟ್ಟುಹಿಡಿದು‌ ಹೋರಾಟ ಮುಂದುವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT