ಜಾಲಹಳ್ಳಿ: ಭೂಮಾಪಕರ ಪ್ರತಿಭಟನೆಯಿಂದ ಸಣ್ಣ ಹಾಗೂ ಬಡ ರೈತರಿಗೆ ತುಂಬಾ ತೊಂದರೆ ಉಂಟಾಗಿದೆ. ಕಳೆದ 50 ದಿನಗಳಿಂದ ತಾಲ್ಲೂಕಿನ ಯಾವುದೇ ರೈತರ ಜಮೀನುಗಳ ಸರ್ವೆ ನಡೆದಿಲ್ಲ.

ಪರವಾನಗಿ ಹೊಂದಿರುವ ಭೂಮಾಪಕರ ಕಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೆಲಸ ಬಿಟ್ಟು ಹೋರಾಟ ಮಾಡುತ್ತಿದ್ದಾರೆ. ಇದರ ಪರಿಣಾಮ ದೇವದುರ್ಗ ಹಾಗೂ ಅರಕೇರ ತಾಲ್ಲೂಕಿನ ಸರ್ವೇ ಕಾರ್ಯ ಸಂಪೂರ್ಣ ಸ್ಥಗಿತಗೊಂಡಿದೆ

ಎರಡೂ ತಾಲ್ಲೂಕಿನಲ್ಲಿ ವಿವಿಧ ಕೆಲಸಕ್ಕೆ ಸುಮಾರು 1500ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ.

‘ಭೂಮಿಯ ಅಳತೆ, ದಾಖಲೆ ಪರಿಶೀಲನೆ ಸೇರಿದಂತೆ ಸರ್ವೇ ಸಂಬಂಧಿತ ಎಲ್ಲಾ ಕಾರ್ಯಗಳು ಸ್ಥಗಿತಗೊಂಡಿವೆ. ರೈತರು ನಿತ್ಯ ಅಗತ್ಯ ದಾಖಲೆಗಳಿಗಾಗಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ರೈತ ಮುಖಂಡ ಹನಮಂತಪ್ಪ ಮಂಡಲಗುಡ್ಡ ದೂರಿದ್ದಾರೆ.

ಭೂಮಿ ಮಾರಾಟ, ವರ್ಗಾವಣೆ ಪ್ರಕ್ರಿಯೆಗಳು ವಿಳಂಬವಾಗುತ್ತಿದ್ದು ಕೃಷಿ ಚಟುವಟಿಕೆಗಳ ಮೇಲೂ ಪರಿಣಮ ಬೀರುತ್ತಿದೆ. ಸಮಸ್ಯೆ ಬಗ್ಗೆ ಜಿಲ್ಲಾ ಅಧಿಕಾರಿಗಳು ಗಮನ ಹರಿಸಿ ತಕ್ಷಣವೇ ರೈತರಿಗೆ ಅನುಕೂಲ ಕಲ್ಪಿಸಬೇಕು. ಬಹುತೇಕ ರೈತರು ಈ ಸಮಸ್ಯೆಯಿಂದ ರೂಸಿ ಹೋಗಿದ್ದಾರೆ. ಅಧಿಕಾರಿಗಳು ನಿರ್ಲಕ್ಷ್ಯ ಮಾಡುವುದನ್ನು ಬಿಟ್ಟು ಭೂಮಾಪಕರ ಬೇಡಿಕೆಗಳನ್ನು ಈಡೇರಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-32-980889907

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.